ಮನೆ ಸುದ್ದಿ ಜಾಲ ಕೋರ್ಟ್ ಗಳಲ್ಲಿ ಸ್ಥಳೀಯ ಭಾಷೆ ಬಳಸುವಂತೆ ಪ್ರಧಾನಿ ಮೋದಿ ಕರೆ

ಕೋರ್ಟ್ ಗಳಲ್ಲಿ ಸ್ಥಳೀಯ ಭಾಷೆ ಬಳಸುವಂತೆ ಪ್ರಧಾನಿ ಮೋದಿ ಕರೆ

0

ನವದೆಹಲಿ(New Delhi): ‘ನಾವು ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಪ್ರೋತ್ಸಾಹಿಸಬೇಕಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ನಡೆದ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆ ಉಪಯೋಗಿಸುವುದರಿಂದ  ನ್ಯಾಯ ವ್ಯವಸ್ಥೆಯಲ್ಲಿ ಸಾಮಾನ್ಯ ನಾಗರಿಕರ ವಿಶ್ವಾಸವನ್ನು ಹೆಚ್ಚಿಸುವುದಲ್ಲದೆ, ಅವರು ಅದರೊಂದಿಗೆ ಹೆಚ್ಚು ಸಂಪರ್ಕ ಹೊಂದುವಂತೆ ಮಾಡುತ್ತದೆ ಎಂದು ಹೇಳಿದರು.

ಇದೇ ವೇಳೆ ನ್ಯಾಯ ವಿತರಣೆಯನ್ನು ಸುಲಭಗೊಳಿಸಲು ಹಳತಾದ ಕಾನೂನುಗಳನ್ನು ರದ್ದುಗೊಳಿಸುವಂತೆ ಪ್ರಧಾನ ಮಂತ್ರಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ‘2015 ರಲ್ಲಿ, ನಾವು ಅಪ್ರಸ್ತುತವಾದ ಸುಮಾರು 1,800 ಕಾನೂನುಗಳನ್ನು ಗುರುತಿಸಿದ್ದೇವೆ. ಇವುಗಳಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ 1,450 ಕಾನೂನುಗಳನ್ನು ರದ್ದುಗೊಳಿಸಲಾಗಿದೆ. ಆದರೆ, ಅಂತಹ 75 ಕಾನೂನುಗಳನ್ನು ಮಾತ್ರ ರಾಜ್ಯಗಳು ರದ್ದುಪಡಿಸಿವೆ” ಎಂದು ಅವರು ಹೇಳಿದರು.

ಭಾರತವು ಸ್ವಾತಂತ್ರ್ಯದ 75 ನೇ ವರ್ಷಾಚರಣೆಯನ್ನು ಆಚರಿಸುತ್ತಿರುವಾಗ, ನ್ಯಾಯವು ಸುಲಭವಾಗಿ ದೊರೆಯುವ, ತ್ವರಿತವಾಗಿ ಮತ್ತು ಎಲ್ಲರಿಗೂ ನ್ಯಾಯಾಂಗ ವ್ಯವಸ್ಥೆಯನ್ನು ರಚಿಸುವತ್ತ ಗಮನಹರಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದರು.