ಮನೆ ಕ್ರೀಡೆ ವಿಶ್ವಕಪ್ : ಇಂದು ಭಾರತ-ನ್ಯೂಝಿಲೆಂಡ್ ಸೆಮಿಫೈನಲ್ ಪಂದ್ಯ

ವಿಶ್ವಕಪ್ : ಇಂದು ಭಾರತ-ನ್ಯೂಝಿಲೆಂಡ್ ಸೆಮಿಫೈನಲ್ ಪಂದ್ಯ

0

ಇಂದು ಐಸಿಸಿ ಏಕದಿನ ವಿಶ್ವಕಪ್ 2023 ಮೊದಲ ಸೆಮಿಫೈನಲ್ ನಲ್ಲಿ ಟೀಮ್ ಇಂಡಿಯಾ ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ. ಮುಂಬೈನ ಪ್ರಸಿದ್ಧ ವಾಂಖೆಡೆ ಕ್ರೀಡಾಂಗಣ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಭಾರತಕ್ಕೆ ಇದೊಂದು ಸೇಡಿನ ಪಂದ್ಯ ಎಂದು ಕೂಡ ಹೇಳಬಹುದು. ಯಾಕೆಂದರೆ, ಕಿವೀಸ್ ವಿರುದ್ಧ 2019 ರ ವಿಶ್ವಕಪ್ ಸೆಮಿ-ಫೈನಲ್ ನಲ್ಲಿ ಭಾರತ ಸೋತು ಟೂರ್ನಿಯಿಂದ ನಿರ್ಗಮಿಸಿತ್ತು. ಈಗ ಮತ್ತೊಮ್ಮೆ ಉಭಯ ತಂಡಗಳು ಸೆಮಿಫೈನಲ್ ನಲ್ಲಿ ಸೆಣೆಸಾಟ ನಡೆಸಲು ಸಜ್ಜಾಗುತ್ತಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ಉಪನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಪ್ರಸಿದ್ಧ್ ಕೃಷ್ಣ.

ನ್ಯೂಝಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲೇಥಮ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ವಿಲ್ ಯಂಗ್ , ಕೈಲ್ ಜಾಮಿಸನ್.