ಮನೆ ಕ್ರೀಡೆ ಐಸಿಸಿ ಏಕದಿನ ವಿಶ್ವಕಪ್ ಫೈನಲ್: ಭಾರತೀಯ ವಾಯುಪಡೆಯು ವಿಶೇಷ ವೈಮಾನಿಕ ಪ್ರದರ್ಶನ

ಐಸಿಸಿ ಏಕದಿನ ವಿಶ್ವಕಪ್ ಫೈನಲ್: ಭಾರತೀಯ ವಾಯುಪಡೆಯು ವಿಶೇಷ ವೈಮಾನಿಕ ಪ್ರದರ್ಶನ

0

ಅಹಮಬಾದಾಬ್: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ. ಈ ರೋಚಕ ಫೈನಲ್ ಪಂದ್ಯವು ಅಹಮದಾಬಾದ್‌ ನ  ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ (ನ.19) ನಡೆಯಲಿದೆ.

ಏಕದಿನ ವಿಶ್ವಕಪ್ ಫೈನಲ್ ಪಂದ್ಯ ಆರಂಭಕ್ಕೂ ಮುನ್ನ ಭಾರತೀಯ ವಾಯುಪಡೆಯು ವಿಶೇಷ ವೈಮಾನಿಕ ಪ್ರದರ್ಶನವನ್ನು ನೀಡಲಿದೆ.

ವಾಯುಪಡೆಯ ಸೂರ್ಯಕಿರಣ್ ತಂಡದ ನೇತೃತ್ವದಲ್ಲಿ ವೈಮಾನಿಕ ಸಾಹಸ ಪ್ರದರ್ಶನ ನಡೆಯಲಿದೆ. ಈ ನಿಟ್ಟಿನಲ್ಲಿ ಪೂರ್ವಭ್ಯಾಸ ಕಸರತ್ತು ಭರದಿಂದ ಸಾಗುತ್ತಿದೆ.

ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಏಕದಿನ ವಿಶ್ವಕಪ್ ಫೈನಲ್ ಪಂದ್ಯವನ್ನು ನೋಡಲು ಆಗಮಿಸುವ ನಿರೀಕ್ಷೆಯಿದೆ. ಆಸ್ಟ್ರೇಲಿಯಾದ ಪ್ರಧಾನಿ ಆ್ಯಂಟನಿ ಅಲ್ಬನೆಸ್‌ ಅವರಿಗೂ ಪ್ರಧಾನಿ ಮೋದಿ ಆಹ್ವಾನ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕ್ರಿಕೆಟ್, ರಾಜಕೀಯ, ಬಾಲಿವುಡ್‌ ನ ಸೇರಿದಂತೆ ಹಲವು ಗಣ್ಯರು ಈ ರೋಚಕ ಪಂದ್ಯಕ್ಕೆ ಸಾಕ್ಷಿಯಾಗಲಿದ್ದಾರೆ. 12 ವರ್ಷಗಳ ಬಳಿಕ ಫೈನಲ್ ತಲುಪಿರುವ ಭಾರತ ಟ್ರೋಫಿ ಗೆಲ್ಲುವ ನಿರೀಕ್ಷೆಯಲ್ಲಿದೆ.

2011ರಲ್ಲಿ ತವರಿನಲ್ಲಿ ನಡೆದ ವಿಶ್ವಕಪ್‌ ನಲ್ಲಿ ಭಾರತ ಚಾಂಪಿಯನ್ ಆಗಿತ್ತು. ಅಂದು ಮುಂಬೈನ ವಾಂಖೆಡೆ ಮೈದಾನದಲ್ಲಿ ಭಾರತ ಜಯಭೇರಿ ಮೊಳಗಿಸಿತ್ತು.