ಮನೆ ರಾಜ್ಯ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಧುಮುಕಿದ ಕಾರು: ಪ್ರಯಾಣಿಕರು ಪಾರು

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಧುಮುಕಿದ ಕಾರು: ಪ್ರಯಾಣಿಕರು ಪಾರು

0

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಧುಮುಕಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಮತ್ತು ಮಹಿಳೆಯರಿಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶನಿವಾರ ನಡೆದಿದೆ.

ಬೆಂಗಳೂರಿನಿಂದ ರಿಪ್ಪನ್‌ ಪೇಟೆ ಮಾರ್ಗವಾಗಿ ಸೊನಲೆಗೆ ತೆರಳುತಿದ್ದ ಕಾರು ಹೊಸನಗರ ರಸ್ತೆಯಲ್ಲಿರುವ ತಾವರೆಕೆರೆಗೆ ಬಿದ್ದಿದ್ದು, ಸಕಾಲಕ್ಕೆ ನೆರವಿಗೆ ಆಗಮಿಸಿದ ಸ್ಥಳಿಯರು ಪ್ರಯಾಣಿಕರನ್ನು ಹೊರಕ್ಕೆ ತಂದಿದ್ದಾರೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಿಪ್ಪನಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.