ಮನೆ ಅಪರಾಧ ಹಾಸನ: ಮಹಿಳಾ ಪೊಲೀಸ್ ಠಾಣೆಯಲ್ಲಿ ಪತ್ನಿಯ ಕೊಲೆಗೆ ಯತ್ನಿಸಿದ ಪತಿ

ಹಾಸನ: ಮಹಿಳಾ ಪೊಲೀಸ್ ಠಾಣೆಯಲ್ಲಿ ಪತ್ನಿಯ ಕೊಲೆಗೆ ಯತ್ನಿಸಿದ ಪತಿ

0

ಹಾಸನ: ಹಾಸನದ ಮಹಿಳಾ ಪೊಲೀಸ್ ಠಾಣೆಯಲ್ಲೇ ಪತಿಯೋರ್ವ ತನ್ನ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಲು ಯತ್ನಿಸಿದ್ದಾನೆ.

ಪತ್ನಿ ಶಿಲ್ಪ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹರೀಶ್ ಕೊಲೆ ಮಾಡಲು ಯತ್ನಿಸಿದ ಪತಿ.

ಹರೀಶ್ ಮತ್ತು ಶಿಲ್ಪ ಮದುವೆಯಾಗಿ 6 ವರ್ಷಗಳಾಗಿದ್ದು, ಒಬ್ಬರ ಮೇಲೆ ಒಬ್ಬರು ಅನುಮಾನಪಟ್ಟು ಜಗಳವಾಡಿ ಕೊನೆಗೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಗಂಡ ನನಗೆ ಕಿರುಕುಳ ನೀಡುತ್ತಿದ್ದಾನೆಂದು ಶಿಲ್ಪ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಪೊಲೀಸರು ಪತಿ ಹರೀಶ್ ​ನನ್ನು ಕರೆಸಿ ವಿಚಾರಣೆ ನಡೆಸುತ್ತಿರುವಾಗ, ಕೊಲೆ ಮಾಡಲು ಯತ್ನಿಸಿದ್ದಾರೆ. ಕೂಡಲೆ ಪೊಲೀಸರು ತಡೆದಿದ್ದು, ಚಾಕು ಕಿತ್ತುಕೊಂಡು ಆರೋಪಿ ಹರೀಶ್ ​ನನ್ನು ಪೊಲೀಸರು ಬಂಧಿಸಿದ್ದಾರೆ.