ಮನೆ ರಾಜಕೀಯ ಸರ್ಕಾರ ಸತ್ತು ಹೋಗಿದೆ, ಸಿಎಂ, ಗೃಹ ಸಚಿವರು ಅಶಕ್ತರು: ಸಿದ್ದರಾಮಯ್ಯ

ಸರ್ಕಾರ ಸತ್ತು ಹೋಗಿದೆ, ಸಿಎಂ, ಗೃಹ ಸಚಿವರು ಅಶಕ್ತರು: ಸಿದ್ದರಾಮಯ್ಯ

0

ಮೈಸೂರು (Mysuru)-ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ. ಸಿಎಂ, ಗೃಹ ಸಚಿವರು ಇಬ್ಬರು ಅಶಕ್ತರು. ಗೃಹ ಸಚಿವರು ಅತ್ಯಂತ ಅಸಮರ್ಥ ಸಚಿವ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಟೀಕಿಸಿದ್ದಾರೆ.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರವೇ ಇಲ್ಲ. ಇವರಿಗೆ ಆಡಳಿತ ಮಾಡುವುದಕ್ಕೆ ಬರ್ತಿಲ್ಲ. ಎಲ್ಲಾ ಪರೀಕ್ಷೆಗಳಲ್ಲೂ ದುಡ್ಡು ದುಡ್ಡು ಎನ್ನುತ್ತಿದ್ದಾರೆ. ದುಡ್ಡು ಕೊಟ್ಟು ಬಂದ ಅಧಿಕಾರಿಗಳು ಇವರ ಮಾತು ಕೇಳುತ್ತಿಲ್ಲ ಎಂದು ದೂರಿದರು.

ಕಾಂಗ್ರೆಸ್‌ನಿಂದ ವಂಶ ಪಾರಂಪರ್ಯ ರಾಜಕಾರಣ ಆರೋಪ ಕುರಿತು ಪ್ರತಿಕ್ರಿಯಿಸಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಯಡಿಯೂರಪ್ಪ ಮತ್ತು ಅವರ ಮಕ್ಕಳು ಯಾರು ? ಅವರು ಅಪ್ಪ- ಮಕ್ಕಳು ಅಲ್ವಾ.?  ಅಂದ್ರೆ ವಂಶ ಪಾರಂಪರ್ಯ ರಾಜಕಾರಣದ ಬಗ್ಗೆ ಮಾತನಾಡಲು ಇವರಿಗೆ ಯಾವ ನೈತಿಜತೆ ಇದೆ? ಎಂದು ಪ್ರಶ್ನಿಸಿದರು.

ನಾಯಕತ್ವ ಬದಲಾವಣೆ ಬಗ್ಗೆ ಬಿ.ಎಲ್.ಸಂತೋಷ್ ಮಾರ್ಮಿಕ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಬಸವರಾಜ ಬೊಮ್ಮಾಯಿ ಅವರನ್ನು ತೆಗೆಯಲು ಹೊರಟಿದ್ದಾರೆ.  ಬಸವರಾಜು ಮೂಲತಃ ಆರ್‌ಎಸ್‌ಎಸ್‌ನವನಲ್ಲ.  ಆದ್ದರಿಂದ ಬದಲಾವಣೆ ಮಾಡಲು ಹೊರಟಿದ್ದಾರೆ. ಬಸವರಾಜ ನಮ್ಮೊಂದಿಗೆ ಇದ್ದ. ಆದರೆ ನಮ್ಮ ಪಟ್ಟುಗಳನ್ನು ಕಲಿಯಲಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಕಲ್ಲಿದ್ದಲ ಕೊರತೆ ಇಲ್ಲ. ಆದರೆ ಸರ್ಕಾರಕ್ಕೆ ಅದನ್ನು ನಿಭಾಯಿಸಲು ಬರುತ್ತಿಲ್ಲ. ಕಲ್ಲಿದ್ದಲು ಹೆಚ್ಚಾಗಿಯೇ ಇದೆ. ಆದರೆ ಅದನ್ನು ಹಂಚಿಕೆ ಮಾಡಲು ಇವರಿಗೆ ಬರುತ್ತಿಲ್ಲ. ಇಂತಹ ಆಡಳಿತದಿಂದ ಕಷ್ಟ ಎದುರಾಗುತ್ತಿದೆ. ಕೃತಕ ಕೊರತೆ ಸೃಷ್ಟಿಯನ್ನು ಮಾಡುತ್ತಿದ್ದಾರೆ. ದಿಢೀರನೆ ಕಲ್ಲಿದ್ದಲು ಉತ್ಪಾದನೆ ನಿಲ್ಲಲು ಹೇಗೆ ಸಾಧ್ಯ? ಅಧಿಕಾರಿಗಳು ಯಾವ ಸಚಿವರ ಮಾತನ್ನು ಕೇಳುತ್ತಿಲ್ಲ. ಸಚಿವರುಗಳಿಗೂ ಇದರ ಬಗ್ಗೆ ಜ್ಞಾನವಿಲ್ಲ. ಇಂತಹ ಕೆಟ್ಟ ಸರ್ಕಾರವನ್ನ ಕರ್ನಾಟಕ ಎಂದೂ ನೋಡಿರಲಿಲ್ಲ. ಇದೊಂದು ಭ್ರಷ್ಟ ಸರ್ಕಾರ ಎಂದು ಹರಿಹಾಯ್ದಿದ್ದಾರೆ.