ಮನೆ ರಾಷ್ಟ್ರೀಯ ನ್ಯಾಷನಲ್ ಹೆರಾಲ್ಡ್ ಪ್ರಕರಣ: ಗಾಂಧಿ ಕುಟುಂಬದ 752 ಕೋಟಿ ಮೌಲ್ಯದ ಆಸ್ತಿ ಜಪ್ತಿ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಗಾಂಧಿ ಕುಟುಂಬದ 752 ಕೋಟಿ ಮೌಲ್ಯದ ಆಸ್ತಿ ಜಪ್ತಿ

0

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಸಂಬಂಧಿಸಿದ ಕಂಪನಿಯ 752 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯವು ಜಪ್ತಿ ಮಾಡಿದೆ.

ಜಪ್ತಿ ಮಾಡಲಾದ ಆಸ್ತಿಗಳಲ್ಲಿ ದೆಹಲಿ ಮತ್ತು ಮುಂಬೈನಲ್ಲಿರುವ ನ್ಯಾಷನಲ್ ಹೆರಾಲ್ಡ್ ಹೌಸ್ ಮತ್ತು ಲಕ್ನೋದ ನೆಹರು ಭವನ ಸೇರಿವೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಇಡಿ ತನಿಖೆ ನಡೆಸುತ್ತಿದೆ. ಅಸೋಸಿಯೇಟೆಡ್ ಜರ್ನಲ್ಸ್‌ಗೆ ಸೇರಿದ ಆಸ್ತಿಯನ್ನು ವಶಪಡಿಸಿಕೊಂಡ ಒಟ್ಟು ಮೌಲ್ಯ 752 ಕೋಟಿ ರೂ. ಆಗಿದೆ.

2014 ರಲ್ಲಿ ದೂರಿನ ನಂತರ ನ್ಯಾಯಾಲಯದ ಆದೇಶದ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಮನಿ ಲಾಂಡರಿಂಗ್ ತನಿಖೆಯನ್ನು ಪ್ರಾರಂಭಿಸಿತು.

ನ್ಯಾಷನಲ್ ಹೆರಾಲ್ಡ್ ಕೇಸ್‌ ನಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಗಾಂಧಿ ಕುಟುಂಬಕ್ಕೆ ಸೇರಿದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ದೆಹಲಿ, ಮುಂಬೈ , ಲಖನೌ ಸೇರಿದಂತೆ ಕೆಲ ನಗರದಲ್ಲಿರುವ ಸ್ಥಿರ ಆಸ್ತಿ ರೂಪದ ಆದಾಯ 661.69 ಕೋಟಿ ರೂಪಾಯಿ ಹಾಗೂ ಯಂಗ್ ಇಂಡಿಯಾ ಸಂಸ್ಥೆಯ ಈಕ್ವಿಟಿ ಷೇರುಗಳಲ್ಲಿ ಹೂಡಿಕೆ ಮಾಡಿರುವ 90.21 ಕೋಟಿ ರೂಪಾಯಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಯಂಗ್ ಇಂಡಿಯನ್ ಮೂಲಕ ಎಜೆಎಲ್ ನ ನೂರಾರು ಕೋಟಿ ಮೌಲ್ಯದ ಆಸ್ತಿ ಪಡೆಯುವ ಸಂಚು ನಡೆದಿರುವುದು ಪತ್ತೆಯಾಗಿದೆ. ಪತ್ರಿಕೆಗಳನ್ನು ಪ್ರಕಟಿಸಲು ರಿಯಾಯಿತಿ ದರದಲ್ಲಿ ಭೂಮಿಯನ್ನು ಪಡೆದ AJL, 2008 ರಲ್ಲಿ ತನ್ನ ಕಾರ್ಯಾಚರಣೆಯನ್ನು ಮುಚ್ಚಿತು ಮತ್ತು ಆಸ್ತಿಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಬಳಸಿತ್ತು.