ಮಂಡ್ಯ: ಬಾಯ್ಲರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕ ಮೃತಪಟ್ಟ ಘಟನೆ ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ದುರ್ಘಟನೆ ಸಂಭವಿಸಿದೆ.
ಬಿಹಾರ ಮೂಲದ ರಾಕೇಶ್ (22) ಮೃತ ದುರ್ದೈವಿ.
ಇತ್ತೀಚೆಗೆ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದ ರಾಕೇಶ್. ಮಂಗಳವಾರ ನೈಟ್ ಶಿಫ್ಟ್ ಕೆಲಸದಲ್ಲಿ ಕೆಲಸ ಮಾಡುತ್ತಿದ್ದ ಇಂದು ಬೆಳಿಗ್ಗೆ 7:30ರ ಸುಮಾರಿಗೆ ಬೂದಿ ತೆಗೆಯುವ ವೇಳೆ ಬಾಯ್ಲರ್ ಮೆಷಿನ್ ಬೆಲ್ಟ್ ಗೆ ಸಿಲುಕಿ ದುರ್ಘಟನೆ ಸಂಭವಿಸಿದೆ.
ಘಟನೆ ನಡೆದ ತಕ್ಷಣ ಕಾರ್ಮಿಕನನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ರಾಕೇಶ್ ಮೃತಪಟ್ಟಿದ್ದಾನೆ.
ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.