ಮನೆ ರಾಷ್ಟ್ರೀಯ ರಜೌರಿ: ಭಯೋತ್ಪಾದಕರೊಂದಿಗಿನ ಎನ್‌ ಕೌಂಟರ್‌’ನಲ್ಲಿ ಕನ್ನಡಿಗ ಕ್ಯಾಪ್ಟನ್ ಎಂವಿ ಪ್ರಾಂಜಲ್ ಹುತಾತ್ಮ

ರಜೌರಿ: ಭಯೋತ್ಪಾದಕರೊಂದಿಗಿನ ಎನ್‌ ಕೌಂಟರ್‌’ನಲ್ಲಿ ಕನ್ನಡಿಗ ಕ್ಯಾಪ್ಟನ್ ಎಂವಿ ಪ್ರಾಂಜಲ್ ಹುತಾತ್ಮ

0

ಆನೇಕಲ್: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ವೇಳೆ ಕನ್ನಡಿಗ ಕ್ಯಾಪ್ಟನ್ ಎಂವಿ ಪ್ರಾಂಜಲ್ ಹುತಾತ್ಮರಾಗಿದ್ದು, ಅವರ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ನಂದನವನದಲ್ಲಿರುವ ನಿವಾಸದಲ್ಲಿ ನೀರವ ಮೌನ ಆವರಿಸಿದೆ.

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದಿದ್ದ ಗುಂಡಿನ ಚಕಮಕಿಯಲ್ಲಿ 66RR ಬೆಟಾಲಿಯನ್ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರು ಹುತಾತ್ಮರಾಗಿದ್ದಾರೆ.

ಸದ್ಯ, ಮಗನ ಸಾವಿನಿಂದಾಗಿ ಮನೆಯಲ್ಲಿ ಮಗನನ್ನು ಕಳೆದುಕೊಂಡು ತಂದೆ ವೆಂಕಟೇಶ್ ಮತ್ತು ತಾಯಿ ಅನುರಾಧ ನೋವಿನಲ್ಲಿದ್ದು, ಅವರನ್ನು ಸಂಬಂಧಿಗಳು ಸಂತೈಸುತ್ತಿದ್ದಾರೆ.

ಕಳೆದ ಆರು ತಿಂಗಳ ಹಿಂದೆ ಮನೆಗೆ ಆಗಮಿಸಿದ್ದ ಪ್ರಾಂಜಲ್, ಮನೆಯಲ್ಲಿ ಹಮ್ಮಿಕೊಂಡಿದ್ದ ಪೂಜಾ ಕೈಂಕರ್ಯದಲ್ಲಿ ಭಾಗಿಯಾಗಿದ್ದರು. ಒಂದು ವಾರ ಪೋಷಕರ ಜೊತೆ ಇದ್ದು ಕರ್ತವ್ಯಕ್ಕೆ ತೆರಳಿದ್ದರು.

ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರ ತಂದೆ ವೆಂಕಟೇಶ್ ಅವರು ಮಂಗಳೂರಿನ MRPL ಸಂಸ್ಥೆಯಲ್ಲಿ ಎಂಡಿ ಆಗಿದ್ದರು. ಹೀಗಾಗಿ ಮಂಗಳೂರು ಹೊರವಲಯದ ಕಾಟಿಪಳ್ಳದಲ್ಲಿ ಕುಟುಂಬ ಸಹಿರ ವೆಂಕಟೇಶ್ ವಾಸವಿದ್ದರು. ಮಂಗಳೂರು, ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿದ ಪ್ರಾಂಜಲ್ ಭಾರತೀಯ ಸೇನೆಗೆ ಸೇರಿದ್ದರು. ಅಲ್ಲದೆ, 63 ರಾಷ್ಟ್ರೀಯ ರೈಫಲ್ಸ್​ ಅನ್ನು ಲೀಡ್ ಮಾಡುತ್ತಿದ್ದರು. ಇತ್ತೀಚೆಗೆ ವೆಂಕಟೇಶ್ ಅವರು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದರಿಂದ ನಂದನವನದಲ್ಲಿ ನೆಲೆಸಿದ್ದರು.