ಮನೆ ರಾಜ್ಯ ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಾಲನೆ: ಪಲ್ಟಿಯಾಗಿ ಹೊತ್ತಿ ಉರಿದ ಕಾರು

ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಾಲನೆ: ಪಲ್ಟಿಯಾಗಿ ಹೊತ್ತಿ ಉರಿದ ಕಾರು

0

ರಾಮನಗರ: ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡುತ್ತಿದ್ದ ಚಾಲಕನಿಗೆ ಬ್ಯಾಲೆನ್ಸ್ ತಪ್ಪಿ ಕಾರು ರಸ್ತೆಯಲ್ಲೇ ಪಲ್ಟಿಯಾಗಿ ಹೊತ್ತಿ ಉರಿದ ಘಟನೆ ರಾಮನಗರ ತಾಲೂಕಿನ ದೊಡ್ಡಗಂಗವಾಡಿ ಗ್ರಾಮದ ಬಳಿ ನಡೆದಿದೆ.

ಕಾರಿನಿಂದ ಕೆಳಗಿಳಿದು ಮೂವರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಮೂಲದ ರೋಹಿತ್, ತರುಣ್, ಮಂಜು ಬಚಾವಾದ ಯುವಕರು.

ಯುವಕರು ಕಂಠಪೂರ್ತಿ ಕುಡಿದು ಗ್ರಾಮದೊಳಗೆ ವೇಗವಾಗಿ ಡ್ರೈವಿಂಗ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಓರ್ವ ವ್ಯಕ್ತಿಗೆ ಗುದ್ದಿ ಎಸ್ಕೇಪ್ ಆಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ, ಹೊತ್ತಿ ಉರಿದಿದೆ ಎನ್ನಲಾಗಿದೆ.

ಈ ವೇಳೆ ಕಾರಿನಲ್ಲಿದ್ದ ಯುವಕರನ್ನ ಹಿಡಿದು ಗ್ರಾಮಸ್ಥರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಸ್ಥಳಕ್ಕೆ ರಾಮನಗರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯುವಕರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.