ತುಮಕೂರು: ಸ್ವತಃ ಅಮಿತ್ ಶಾ ಅವರೇ ಮನೆಗೆ ಬಂದು ಕೂತ್ಕೊಂಡು ಎರಡು ಕಡೆ ಚುನಾವಣೆಗೆ ನಿಲ್ಲಬೇಕು ಎಂದು ಹೇಳಿದರೆ ನಾನೇನು ಮಾಡ್ಲಿ ಹೇಳಿ ಸ್ವಾಮೀಜಿ ಎಂದು ಸಿದ್ದಗಂಗಾ ಶ್ರೀಗಳ ಮುಂದೆ ವಿ.ಸೋಮಣ್ಣ ವಿಧಾನಸಭಾ ಚುನಾವಣೆಯ ಸೋಲಿನ ನೋವು ತೋಡಿಕೊಂಡಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಹತಾಶೆ, ಬಿಜೆಪಿ ರಾಜ್ಯಾಧ್ಯಕ್ಷ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಸಿದ್ದಗಂಗಾ ಮಠಕ್ಕೆ ತೆರಳಿ ಶ್ರೀಗಳನ್ನು ಭೇಟಿಯಾದರು.
ಶ್ರೀಗಳ ಮುಂದೆ ಸೋಮಣ್ಣ ಚುನಾವಣಾ ಸೋಲಿನ ನೋವು ತೋಡಿಕೊಂಡರು. ಶಿವಕುಮಾರ ಶ್ರೀಗಳ ಗದ್ದುಗೆಗೆ ಸೋಮಣ್ಣ ವಿಶೇಷ ಪೂಜೆ ಸಲ್ಲಿಸಿದರು. ಗೋವಿಂದರಾಜ ಕ್ಷೇತ್ರ ಬಿಟ್ಟು ಹೋಗಬಾರದಿತ್ತು ಎಂದು ಸ್ಥಳೀಯ ಮುಖಂಡರೊಬ್ಬರು ಮಾತು ಆರಂಭಿಸಿದಾಗ ಶ್ರೀಗಳ ಎದುರು ಅಳಲು ತೋಡಿಕೊಂಡರು.
ಇಲ್ಲಿ ಬಿಟ್ಟು ಅಲ್ಲಿ ಸ್ಪರ್ಧೆ ಮಾಡಿದ್ದೇ ನನ್ನ ಮಹಾ ಅಪರಾಧವಾಯ್ತು. ಕೇಂದ್ರ ಗೃಹ ಅಮಿತ್ ಶಾ ನಮ್ಮ ಮನೆಯಲ್ಲಿ ಕುಳಿತುಕೊಂಡು ಜೀವ ತೆಗೆದರು. ಎರಡು ಗಂಟೆ ಮನೆಯಲ್ಲಿ ಕುಳಿತುಕೊಂಡಿದ್ದರು, ಆಗಲ್ಲ ಅಂತಾ ಹೇಳಿದ್ದೆ. ಪ್ರಧಾನಿ ಮೋದಿಯವರು ದೆಹಲಿಗೆ ಕರೆಸಿ ನೀನು ಸ್ಪರ್ಧೆ ಮಾಡು ಅಂದರು, ಏನ್ಮಾಡಲಿ ಎಂದು ಬೇಸರ ವ್ಯಕ್ತಪಡಿಸಿದರು.
ಅಮಿತ್ ಶಾ ಅವರು ಬಂದು ಎರಡೂವರೆ ಗಂಟೆ ಮನೆಯಲ್ಲಿ ಕುತ್ಕೊಂಡ್ ಬಿಟ್ರು. ಅವರೇ ನಿಂತುಕೊ ಅಂದ್ಮೇಲೆ ನಾನು ಏನ್ ಮಾಡಬೇಕು. ಏನ್ ಮಾಡಲಿ ಹೇಳಿ ಸ್ವಾಮೀಜಿ. ಆಗ ನಾನು ಇಲ್ಲಾ ಅಂತಾ ಹೇಳಿದೆ. ಪಿಎಂ ಮೋದಿ ದೆಹಲಿಗೆ ಕರೆಸಿದ್ರು. ನಾಲ್ಕು ದಿನ ಅಲ್ಲೇ ಇಟ್ಕೊಂಡ್ರು. ನೀನು ನಿಂತುಕೊ ಅಂತಾ ಹೇಳಿದಾಗ ಏನ್ ಮಾಡಬೇಕು ಎಂದು ಹತಾಶೆಯ ನುಡಿಗಳನ್ನಾಡಿದರು.
ಮಠಕ್ಕೆ ಭೇಟಿ ಕುರಿತು ಮಾತನಾಡಿದ ಸೋಮಣ್ಣ, ನಾನು ಮಠದ ಭಕ್ತ. 44 ದಶಕಗಳ ಸಂಬಂಧ ನನ್ನದು. ಡಿಸೆಂಬರ್ 6 ರಂದು ಗುರುಭವನ ಲೋಕಾರ್ಪಣೆ ಮಾಡುತ್ತೇವೆ. ಗುರುಭವನ ನಿರ್ಮಾಣ ಮಾಡುವ ಪುಣ್ಯ ಸಿಕ್ಕಿದೆ. 6 ರಂದು ನಡೆಯುವ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಈ ಭಾಗದ ಜನಪ್ರತಿನಿಧಿಗಳನ್ನು ಆಹ್ವಾನಿಸಿದ್ದೇನೆ. ಇಬ್ಬರು ಸಚಿವರು ಇರುತ್ತಾರೆ. ರಾಜಣ್ಣ, ಪರಮೇಶ್ವರ್ ಇರುತ್ತಾರೆ. ಅದಕ್ಕೆ ರಾಜಕೀಯ ಮಾಡೋವಷ್ಟು ಕೀಳುಮಟ್ಟ ನಾನು ಮಾಡಲ್ಲ. ಈ ಕಾರ್ಯಕ್ರಮಕ್ಕೆ ರಾಜಕೀಯ ಲೇಪನ ಬೇಡ ಎಂದು ತಿಳಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.