ಮನೆ ರಾಜ್ಯ ಹುತಾತ್ಮ ಯೋಧ ಕ್ಯಾ. ಎಂ.ವಿ ಪ್ರಾಂಜಲ್ ಪಂಚಭೂತಗಳಲ್ಲಿ ಲೀನ

ಹುತಾತ್ಮ ಯೋಧ ಕ್ಯಾ. ಎಂ.ವಿ ಪ್ರಾಂಜಲ್ ಪಂಚಭೂತಗಳಲ್ಲಿ ಲೀನ

0

ಬೆಂಗಳೂರು: ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರ ವಿರುದ್ದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಕನ್ನಡಿಗ ಕ್ಯಾಪ್ಟನ್‌ ಎಂ.ವಿ ಪ್ರಾಂಜಲ್‌ ಅವರ ಅಂತ್ಯಕ್ರಿಯೆ  ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.

ನಿನ್ನೆ ಕ್ಯಾಪ್ಟನ್ ಪ್ರಾಂಜಲ್ ​ಅವರ ಪಾರ್ಥಿವ ಶರೀರ, ಹುಟ್ಟೂರಾದ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಬಳಿಯ ನಂದನವನ ಲೇಔಟ್ ನ ನಿವಾಸಕ್ಕೆ ಆಗಮಿಸಿದ್ದು, ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಮಧ್ಯಾಹ್ನ 12.30ಕ್ಕೆ ನಿವಾಸದಿಂದ ತೆರೆದ ವಾಹನದಲ್ಲಿ ಕಲ್ಲುಬಾಳು ರಸ್ತೆ ಮೂಲಕ ಜಿಗಣಿಯ ಒಡಿಸಿ ಸರ್ಕಲ್​, ಜಿಗಣಿ ರಸ್ತೆ ಮೂಲಕ ಹರಪನ್ನಹಳ್ಳಿ – ಕೊಪ್ಪ ಗೇಟ್ – ಬೇಗಿಹಳ್ಳಿ – ಬನ್ನೇರುಘಟ್ಟ ರಸ್ತೆ – ನೈಸ್​ ರೋಡ್ – ಕೂಡ್ಲುಗೇಟ್​ ಮೂಲಕ ಸೋಮಸುಂದರಪಾಳ್ಯ ವಿದ್ಯುತ್​ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಕ್ಯಾಪ್ಟನ್​ ಪ್ರಾಂಜಲ್​ ಅವರ ಅಂತ್ಯಕ್ರಿಯೆ ನೆರವೇರಿದೆ.

ಬೆಂಗಳೂರಿನ ಸೋಮಸುಂದರಪಾಳ್ಯದ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಎಂ.ವಿ ಪ್ರಾಂಜಲ್ ಅವರ ತಂದೆ ವೆಂಕಟೇಶ್​ ಅವರು ಅಂತಿಮ ವಿಧಿವಿಧಾನ ಪೂರೈಸಿದರು.

ಭಾರತೀಯ ಸೇನೆಯಿಂದ ಕುಶಾಲ ತೋಪು ಸಿಡಿಸಿದ ಸೇನಾಧಿಕಾರಿಗಳು, ಎಂ.ವಿ ಪ್ರಾಂಜಲ್​ ಗೆ ಅಂತಿಮ ನಮನ ಸಲ್ಲಿಸಿದರು.

ಬಳಿಕ ಪ್ರಾಂಜಲ್ ಪಾರ್ಥಿವ ಶರೀರದ ಮೇಲಿದ್ದ ತ್ರಿವರ್ಣಧ್ವಜವನ್ನು ಪೋಷಕರಿಗೆ ಹಸ್ತಾಂತರಿಸಿದರು.