ಮನೆ ಅಪರಾಧ ರಾಯಚೂರು: ಮದ್ಯ ಸೇವಿಸಲು ಹಣ ನೀಡಲು ನಿರಾಕರಿಸಿದ ಪತ್ನಿಯನ್ನು ಕೊಂದ ಪತಿ

ರಾಯಚೂರು: ಮದ್ಯ ಸೇವಿಸಲು ಹಣ ನೀಡಲು ನಿರಾಕರಿಸಿದ ಪತ್ನಿಯನ್ನು ಕೊಂದ ಪತಿ

0

ರಾಯಚೂರು: ಮದ್ಯಪಾನ ಮಾಡಲು ಹಣ ಕೊಡಲಿಲ್ಲ ಎಂದು ಪತ್ನಿಯನ್ನು ಪತಿ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಲಿಂಗಸ್ಗೂರು ತಾಲ್ಲೂಕಿನ ಚಿಕ್ಕ ಉಪ್ಪೇರಿಯಲ್ಲಿ ನಡೆದಿದೆ.

ಸುನೀತಾ (28) ಮೃತ ಮಹಿಳೆ. ಬಸವರಾಜ್ ಕೊಲೆಗೈದ ಪತಿ.

ಜಮೀನಿನಲ್ಲಿ ಬೆಳಿಗ್ಗೆ ನೀರು ಬಿಡುವಾಗ ಇಬ್ಬರ ನಡುವೆ ಗಲಾಟೆ ಆಗಿದೆ. ಕುಡಿಯುವುದಕ್ಕೆ ಹಣ ನೀಡುವಂತೆ ಪತ್ನಿಗೆ ಕಿರುಕುಳ ನೀಡಿದ್ದಾನೆ. ಆಗ ಹಣ ಕೊಡದಿದ್ದಕ್ಕೆ ಸಲಾಕೆಯಿಂದ ಹೊಡೆದು ಪತ್ನಿಯನ್ನು ಕೊಲೆ ಮಾಡಲಾಗಿದೆ. ಇಬ್ಬರು ಪ್ರೀತಿಸಿ ಮದುವೆಯಾಗಿದ್ದರು.

 ಸ್ಥಳಕ್ಕೆ ಲಿಂಗಸ್ಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.