ಮನೆ ಮನರಂಜನೆ ‘ಕಾಂತಾರ ಚಾಪ್ಟರ್ 1’ ಚಿತ್ರದ ಮೊದಲ ಪೋಸ್ಟರ್ ಅನಾವರಣ

‘ಕಾಂತಾರ ಚಾಪ್ಟರ್ 1’ ಚಿತ್ರದ ಮೊದಲ ಪೋಸ್ಟರ್ ಅನಾವರಣ

0

‘ಕಾಂತಾರ ಚಾಪ್ಟರ್ 1’ ಚಿತ್ರ ಬರಲಿದೆ ಎಂದಾಗಿನಿಂದಲೂ ಅಭಿಮಾನಿಗಳ ವಲಯದಲ್ಲಿ ಕುತೂಹಲ ಮನೆ ಮಾಡಿದ್ದು, ಇದನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಚಿತ್ರದ ಪೋಸ್ಟರ್ ಮೂಡಿಬಂದಿದೆ.

ಇಂದು (ನವೆಂಬರ್ 27) ಚಿತ್ರತಂಡ ಉಡುಪಿ ಜಿಲ್ಲೆಯ, ಕುಂದಾಪುರ ತಾಲೂಕಿನ ಆನೆಗುಡ್ಡೆ ದೇವಸ್ಥಾನದಲ್ಲಿ ‘ಕಾಂತಾರ ಚಾಪ್ಟರ್ 1’  ಚಿತ್ರದ ಮುಹೂರ್ತ ನೆರವೇರಿಸುವುದರ ಜೊತೆಗೆ ಮೊದಲ ಪೋಸ್ಟರ್ ಅನಾವರಣ ಮಾಡಿದೆ.

ಜನವರಿಯಲ್ಲಿ ಚಿತ್ರಕ್ಕೆ ಶೂಟಿಂಗ್ ಆರಂಭ ಆಗಲಿದೆ ಎನ್ನಲಾಗುತ್ತಿದೆ.  ‘ಕಾಂತಾರ’ ಚಿತ್ರ ಮೊದಲು ಕನ್ನಡದಲ್ಲಿ ರಿಲೀಸ್ ಆಯಿತು.

ಆ ಬಳಿಕ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗೆ ಡಬ್ ಆಗಿ ಬಿಡುಗಡೆ ಕಂಡಿತು. ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗೆಲುವು ಕಂಡಿತು. ಈಗ ‘ಕಾಂತಾರ 2’ ಸಿನಿಮಾ ಕನ್ನಡ ಮಾತ್ರವಲ್ಲದೆ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಬೆಂಗಾಲಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಮೂಡಿಬರುತ್ತಿದೆ.

‘ಕಾಂತಾರ’ ಚಿತ್ರವನ್ನು ‘ಹೊಂಬಾಳೆ ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದರು. ಸಣ್ಣ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತು. ಈಗ ‘ಕಾಂತಾರ 2’ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಲು ತಂಡ ನಿರ್ಧರಿಸಿದೆ. ರಿಷಬ್ ಶೆಟ್ಟಿ ಅವರು ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.