ಹಾರ್ದಿಕ್ ಪಾಂಡ್ಯ ವಿಚಾರದಲ್ಲಿ ಕೆಲವು ದಿನಗಳಿಂದ ಎದ್ದಿದ್ದ ಎಲ್ಲಾ ವದಂತಿಗಳಿಗೆ ಇಂದು ತೆರೆ ಬಿದ್ದಿದೆ.
ಎರಡು ವರ್ಷಗಳ ಕಾಲ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಮತ್ತೊಮ್ಮೆ 5 ಬಾರಿಯ ಚಾಂಪಿಯನ್ ಮುಂಬೈ ತಂಡಕ್ಕೆ ಮರಳಿದ್ದಾರೆ.
ಹಾಗೆಯೇ ಮುಂಬೈ ತಂಡದಲ್ಲಿದ್ದ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಆರ್ ಸಿಬಿ ಪಾಲಾಗಿದ್ದಾರೆ.
ಈ ವಿಚಾರವನ್ನು ಸ್ವತಃ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯೇ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.














