ಮನೆ ಕಾನೂನು ಹೆಣ್ಣು ಭ್ರೂಣ ಹತ್ಯೆ ಪ್ರಕರಣ: 3 ತಿಂಗಳಲ್ಲಿ 342 ಭ್ರೂಣ ಹತ್ಯೆ- ಬೆಂಗಳೂರು ನಗರ ಪೊಲೀಸ್...

ಹೆಣ್ಣು ಭ್ರೂಣ ಹತ್ಯೆ ಪ್ರಕರಣ: 3 ತಿಂಗಳಲ್ಲಿ 342 ಭ್ರೂಣ ಹತ್ಯೆ- ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ​ದಯಾನಂದ್​

0

ಬೆಂಗಳೂರು: ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲವನ್ನು ಬೈಯ್ಯಪ್ಪನಹಳ್ಳಿ ಪೊಲೀಸರು ಭೇದಿಸಿದ್ದಾರೆ. ಅಕ್ಟೋಬರ್​​ 15ರಂದು ಅನುಮಾನದ ಮೇಲೆ ಪೊಲೀಸರು ವಾಹನ ತಪಾಸಣೆ ಮಾಡಿದ್ದರು. ಬಳಿಕ ವಾಹನ ಚೇಸ್ ಮಾಡಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹೆಣ್ಣು ಮಗು ಎಂದು ಆರೋಪಿಗಳು ಭ್ರೂಣ ಹತ್ಯೆ ಮಾಡಿದ್ದಾರೆ. ಪ್ರಕರಣ ಸಂಬಂಧ ಇಬ್ಬರು ವೈದ್ಯರು, ಮೂವರು ಲ್ಯಾಬ್​ ಟೆಕ್ನಿಷಿಯನ್ ಸೇರಿದಂತೆ 9 ಜನರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ​ದಯಾನಂದ್​ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಮೂರು ತಿಂಗಳ ಅವಧಿಯಲ್ಲಿ ಆರೋಪಿಗಳು 342 ಭ್ರೂಣ ಹತ್ಯೆ ಮಾಡಿದ್ದಾರೆ. ಒಂದು ಕೃತ್ಯವೆಸಗಲು 20 ಸಾವಿರದಿಂದ 25 ಸಾವಿರ ಪಡೆಯುತ್ತಿದ್ದರು. ಬಂಧಿತ ವೀರೇಶ್​, ಸಿದ್ದೇಶ್​ ಈ ಹಿಂದೆ ಕಿಡ್ನ್ಯಾಪ್ ಕೇಸ್​ ನಲ್ಲಿ ಭಾಗಿಯಾಗಿದ್ದರು ಎಂದು ತಿಳಿಸಿದರು.

ಆರ್​.ಆರ್.ನಗರದಲ್ಲಿನ ಹಸುಗೂಸು ಮಾರಾಟ ಪ್ರಕರಣವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಮಕ್ಕಳ ಮಾರಾಟದ ಬಗ್ಗೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಿಫ್ಟ್​​ ಕಾರಿನಲ್ಲಿ ಮಗು ಸಾಗಿಸುತ್ತಿದ್ದಾಗ ಸಿಸಿಬಿ ತಂಡ ದಾಳಿ ಮಾಡಿತ್ತು. ಇಪತ್ತು ದಿನದ ಗಂಡು ಮಗುವನ್ನು ರಕ್ಷಣೆ ಮಾಡಲಾಗಿದೆ. ಬಂಧಿತ ಆರೋಪಿಗಳು ತಮಿಳುನಾಡು ಮೂಲದವರು. ಬಡ ಮಹಿಳೆಯರಿಗೆ ಗರ್ಭಧಾರಣೆ ಮಾಡಿಸಿ ಮಗು ಮಾರುತ್ತಿದ್ದರು ಎಂದರು.

8 ರಿಂದ 10 ಲಕ್ಷಕ್ಕೆ ಮಗು ಮಾರಾಟ ಮಾಡುತ್ತಿದ್ದದ್ದು ಬೆಳಕಿಗೆ ಬಂದಿದೆ. ತಮಿಳುನಾಡಿನ ಆಸ್ಪತ್ರೆಗಳು, ವೈದ್ಯರು ಮತ್ತು ಬೆಂಗಳೂರಿನ ಓರ್ವ ಮಹಿಳೆ ಮಕ್ಕಳನ್ನು ಮಾರಾಟ ಮಾಡಲು ಸಹಾಯ ಮಾಡುತ್ತಿದ್ದಳು. ಹತ್ತಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿರುವ ಬಗ್ಗೆ ಮಾಹಿತಿ ಇದೆ. ತಮಿಳುನಾಡಿನ 4 ಆಸ್ಪತ್ರೆಗಳಲ್ಲಿ ಕೃತ್ಯ ನಡೆದಿರುವ ಬಗ್ಗೆ ಮಾಹಿತಿ ಇದೆ ಎಂದು ಹೇಳಿದರು.