ಮನೆ ಅಪರಾಧ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ: ಪ್ರಿನ್ಸಿಪಾಲ್‌, ಮೇಲ್ವಿಚಾರಕಿ ಅಮಾನತು

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ: ಪ್ರಿನ್ಸಿಪಾಲ್‌, ಮೇಲ್ವಿಚಾರಕಿ ಅಮಾನತು

0

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಪ್ರಿನ್ಸಿಪಾಲ್‌ ಮಂಜುನಾಥ ಪುರದ್ ಹಾಗೂ ವಸತಿ ಶಾಲೆಯ ಮೇಲ್ವಿಚಾರಕಿ ನಸೀನಾ ಬಾನು ಅವರನ್ನು ಸೇವೆಯಿಂದ  ಅಮಾನತುಗೊಳಿಸಿ ದಾವಣಗೆರೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಆದೇಶಿಸಿದ್ದಾರೆ.

ಹಾಸ್ಟೆಲ್‌ ನಲ್ಲಿ ನೀಡಿದ್ದ ಊಟದಲ್ಲಿ ಹುಳು ಇರುವ ಬಗ್ಗೆ ವಸತಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ ಹಿನ್ನೆಲೆ ಅಮಾನತು ಆದೇಶಗೊಳಿಸಿದ್ದಾರೆ.

ಜೊತೆಗೆ ಅಮಾನತುಗೊಂಡವರು ಕೇಂದ್ರ ಸ್ಥಾನ ಬಿಟ್ಟು ತೆರಳದಂತೆ ಡಿಸಿ ಖಡಕ್​ ಸೂಚನೆ ನೀಡಿದ್ದಾರೆ. ಇನ್ನು ಜಿಲ್ಲಾಸ್ಪತ್ರೆ ಸೇರಿದಂತೆ ಸಂತೆಬೆನ್ನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು ಹಾಗೂ ಪೋಷಕರು ವಸತಿ ಶಾಲೆ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು.