ಮನೆ ಕ್ರೀಡೆ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ

ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ

0

2023ರ ವಿಶ್ವಕಪ್ ಸೋಲಿನ ನಂತರ ಟೀಂ ಇಂಡಿಯಾದ ಮುಖ್ಯ ಕೋಚ್ ಬದಲಾಗುತ್ತಾರೋ ಇಲ್ಲವೋ ಎಂಬ ಪ್ರಶ್ನೆಗಳಿಗೆ ಉತ್ತರ ನೀಡಿರುವ ಬಿಸಿಸಿಐ ಬುಧವಾರ ಮಹತ್ವದ ಘೋಷಣೆ ಮಾಡಿದೆ.

ರಾಹುಲ್ ದ್ರಾವಿಡ್ ಅವರನ್ನು ಮುಖ್ಯ ಕೋಚ್ ಆಗಿ ಉಳಿಸಿಕೊಂಡಿದೆ. ವಾಸ್ತವವಾಗಿ ವಿಶ್ವಕಪ್ ಫೈನಲ್ ನಂತರ ರಾಹುಲ್ ದ್ರಾವಿಡ್ ಅವರ ಒಪ್ಪಂದವು ಕೊನೆಗೊಂಡಿತ್ತು. ಅಂದಿನಿಂದ ರಾಹುಲ್ ದ್ರಾವಿಡ್ ಬದಲಿಗೆ ವಿವಿಎಸ್ ಲಕ್ಷ್ಮಣ್ ಅವರನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಿಸಲಾಗುತ್ತದೆ ಎಂಬ ಊಹಾಪೋಹಗಳು ಸೃಷ್ಟಿಯಾಗಿದ್ದವು.

ಆದರೆ ಆ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ, ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನು ಮುಂದುವರೆಸಿದೆ.