ಮನೆ ರಾಜಕೀಯ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಬಿ.ಎಸ್.ಯಡಿಯೂರಪ್ಪ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಬಿ.ಎಸ್.ಯಡಿಯೂರಪ್ಪ

0

ಶಿವಮೊಗ್ಗ (Shivamogga)ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(B.S.Yediyurappa) ಅವರು ತಳ್ಳಿಹಾಕಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಎಸ್ವೈ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು “ಒಳ್ಳೆಯ ಕೆಲಸ ಮಾಡುತ್ತಿದ್ದಾರೆ”. ನನ್ನ ಪ್ರಕಾರ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂದರು.

ಕೆಲವು ಹಾಲಿ ಶಾಸಕರಿಗೆ ಮುಂಬರುವ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಸಿಗದೇ ಇರಬಹುದು ಎಂದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಈ ವಿಷಯದ ಬಗ್ಗೆ ಚರ್ಚಿಸಲು ನಾನು ಇಷ್ಟಪಡುವುದಿಲ್ಲ. ಈ ಬಗ್ಗೆ ಪಕ್ಷದ ಕೇಂದ್ರ ನಾಯಕತ್ವ ನಿರ್ಧರಿಸುತ್ತದೆ ಎಂದರು.

ಅಮಿತ್ ಶಾ ಅವರು ‘ಖೇಲೋ ಇಂಡಿಯಾ’ ಸಮಾರೋಪ ಸಮಾರಂಭ ಹಾಗೂ ಬಸವ ಜಯಂತಿ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸುತ್ತಿದ್ದಾರೆ. ನಾನು ಅವರನ್ನು ಭೇಟಿ ಮಾಡುತ್ತೇನೆ. ಅವರು ರಾಜ್ಯದ ರಾಜಕೀಯ ಪರಿಸ್ಥಿತಿಯ ಬಗ್ಗೆ ತಿಳಿದುಕೊಳ್ಳಲಿದ್ದಾರೆ. ಮುಂದೆ ವಿಧಾನಸಭೆ ಚುನಾವಣೆ ಇರುವ ಕಾರಣ, ಪ್ರಧಾನಿ ಮತ್ತು ಅಮಿತ್ ಶಾ ಅವರು ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡಲು ನಿರ್ಧರಿಸಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾವು ನಿಗದಿಪಡಿಸಿರುವ 150 ಸ್ಥಾನಗಳ ಗುರಿ ತಲುಪಲು ಸಲಹೆ ನೀಡಲಿದ್ದಾರೆ ಎಂದರು.

ಬಿ.ಎಲ್.ಸಂತೋಷ್‌ ಅವರು ʻನಾಯಕತ್ವ ಬದಲಾವಣೆಯೇ ಬಿಜೆಪಿಗೆ ಶಕ್ತಿʼ ಎಂದಿದ್ದರು. ಇದರಿಂದ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಊಹಾಪೋಹಗಳು ಎದ್ದಿದೆ. ಆದರೆ ಇದನ್ನು ಮಾಜಿ ಸಿಎಂ ಬಿಎಸ್ವೈ ಅವರು ತಳ್ಳಿಹಾಕಿದ್ದಾರೆ.