ಚಿಕ್ಕಮಗಳೂರು: ಬ್ಯಾಂಕ್ ಸಿಬ್ಬಂದಿಗಳೇ ಗ್ರಾಹಕರಿಗೆ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದ ಬೋಳರಾಮೇಶ್ವರ ದೇಗುಲ ಬಳಿ ಇರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದಿದೆ.
ಬ್ಯಾಂಕ್ ಮ್ಯಾನೇಜರ್ ಸಂದೀಪ್ ಕೊಲ್ಲೂರಿ, ಪ್ರಶಾಂತ್, ನಾರಾಯಣಸ್ವಾಮಿ, ಲಾವಣ್ಯ, ಶ್ವೇತಾ ವಂಚನೆ ಎಸಗಿದ ಆರೋಪಿಗಳು.
ಗ್ರಾಹಕರು ಬ್ಯಾಂಕ್ ನಲ್ಲಿಟ್ಟದ ಚಿನ್ನ, ಎಫ್ ಡಿ ಹಣವನ್ನು ಬ್ಯಾಂಕ್ ಸಿಬ್ಬಂದಿ ದುರುಪಯೋಗಪಡಿಸಿಕೊಂಡಿರುವುದು ಬೆಳಕಿಗೆ ಬಂದಿದೆ.
ಆರೋಪಿಗಳು ಗ್ರಾಹಕರ ಚಿನ್ನವನ್ನು ಮಾರಾಟ ಮಾಡಿ ನಕಲಿ ಚಿನ್ನವನ್ನು ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದಾರೆ. ಬೆಂಗಳೂರು ಮುಖ್ಯ ಶಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. 141 ಚಿನ್ನದ ಪ್ಯಾಕೆಟ್ ಗಳ ಪೈಕಿ 140 ಪ್ಯಾಕೆಟ್ ಗಳಲ್ಲಿ ನಕಲಿ ಚಿನ್ನ ಪತ್ತೆಯಾಗಿವೆ. ಬ್ಯಾಂಕ್ ಆಡಿಟ್ ನಲ್ಲಿ ಕೋಟ್ಯಾಂತರ ರೂ. ವಂಚನೆ ಮಾಡಿರುವುದು ಬಹಿರಂಗಗೊಂಡಿದೆ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬೆಂಗಳೂರು ಮ್ಯಾನೇಜರ್ ಆರೋಪಿಗಳ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.