ಹಾಸನ: ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಹಾಡಹಗಲೇ ಸಿನಿಮೀಯ ರೀತಿಯಲ್ಲಿ ಶಿಕ್ಷಕಿಯನ್ನ ದುಷ್ಕರ್ಮಿಗಳು ಕಿಡ್ನಾಪ್ ಮಾಡಿರುವ ಘಟನೆ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯಲ್ಲಿ ನಡೆದಿದೆ.
ಅರ್ಪಿತಾ ಕಿಡ್ನಾಪ್ ಆದ ಶಿಕ್ಷಕಿ.
ರಾಮು ಎಂಬಾತನೇ ಕಿಡ್ನಾಪ್ ಮಾಡಿರುವ ಆರೋಪಿ. ಕಳೆದ 15 ದಿನಗಳ ಹಿಂದೆ ರಾಮು ಶಿಕ್ಷಕಿ ಅರ್ಪಿತಾ ಮನೆಗೆ ಬಂದು ಮದುವೆ ಮಾಡಿಕೊಳ್ಳುವಂತೆ ಕೇಳಿದ್ದಾನೆ. ಆದರೆ ಆಕೆಯ ಪೋಷಕರು ಮದುವೆಗೆ ಒಪ್ಪಿಗೆ ನೀಡಿರಲಿಲ್ಲ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಮನೆಯಿಂದ ಶಾಲೆಗೆ ತೆರಳುತ್ತಿದ್ದ ಶಿಕ್ಷಕಿ ಅರ್ಪಿತಾರನ್ನ ರಾಮು ತನ್ನ ಸ್ನೇಹಿತರ ಜೊತೆ ಸೇರಿ ಕಾರಿನಲ್ಲಿ ಅಪಹರಿಸಿದ್ದಾನೆ. ಈ ಕೃತ್ಯ ಸಿಸಿ ಟಿವಿಯಲ್ಲಿ ದಾಖಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಶಿಕ್ಷಕಿ ಅರ್ಪಿತಾ ತಾಯಿ, ನನ್ನ ಮಗಳನ್ನ ಮದುವೆ ಮಾಡಿಕೊಡುವಂತೆ ಕೇಳಿದ್ದರು. ಆದರೆ ನಾವು ಕೊಡಲ್ಲ ಎಂದಿದ್ದವು. ಈ ಹಿನ್ನೆಲೆಯಲ್ಲಿ ಕಿಡ್ನಾಪ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಘಟನಾಸ್ಥಳಕ್ಕೆ ಸ್ಥಳಕ್ಕೆ ಹಾಸನ ಎಸ್ ಪಿ ಭೇಟಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.