ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಭಯೋತ್ಪಾದಕ ಹತನಾಗಿದ್ದಾನೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಜಿಲ್ಲೆಯ ಅರಿಹಾಲ್ ಪ್ರದೇಶದ ತೋಟವೊಂದರಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯ ವೇಳೆ ಭಯೋತ್ಪಾದಕರಿಂದ ಗುಂಡಿನ ದಾಳಿ ನಡೆದಿದ್ದು ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ್ದು ಈ ವೇಳೆ ಓರ್ವ ಭಯೋತ್ಪಾದಕ ಹತನಾಗಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶುಕ್ರವಾರ ಮತ್ತೆ ಕಾರ್ಯಾಚರಣೆಯನ್ನು ಮುಂದುವರೆಸುವುದಾಗಿ ಭದ್ರತಾ ಪಡೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Saval TV on YouTube