ಮನೆ ರಾಜ್ಯ ರಾಜ್ಯದಲ್ಲಿ 111 ಮಂದಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ 111 ಮಂದಿಗೆ ಕೋವಿಡ್ ಪಾಸಿಟಿವ್

0

ಬೆಂಗಳೂರು (Bengaluru)- ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 111 ಮಂದಿಗೆ ಕೋವಿಡ್ (Covid) ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,47,837ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40060 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 76 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,05920ಕ್ಕೆ ಏರಿಕೆಯಾಗಿದೆ. ಇನ್ನು 1815 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 11 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,82,780ಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲೂ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ.