ಮನೆ ರಾಷ್ಟ್ರೀಯ ಸೇನಾಪಡೆಯಿಂದ ಎಲ್‌ ಇಟಿಯ 3 ಉಗ್ರರ ಬಂಧನ

ಸೇನಾಪಡೆಯಿಂದ ಎಲ್‌ ಇಟಿಯ 3 ಉಗ್ರರ ಬಂಧನ

0

ಬಾರಾಮುಲ್ಲಾ (Baramulla)- ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಭಾರತೀಯ ಸೇನಾ ಪಡೆ ಬಂಧಿಸಿದೆ.

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್‌ನ ಹೈಗಾಮ್ ಪ್ರದೇಶದಲ್ಲಿ ಸೇನಾ ಪಡೆ ಭರ್ಜರಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಬಂಧಿಸಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮಾಹಿತಿ ನೀಡಿದ್ದಾರೆ.

ಇತ್ತೀಚಿಗೆ ಸ್ಥಳೀಯರಲ್ಲದ ಜನರ ಹತ್ಯೆಗಳು ಮತ್ತು ವಿವಿಧೆಡೆ ನಡೆದ ಗ್ರೆನೇಡ್ ದಾಳಿಗಳ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು, ಇದರಂತೆ ವಿವಿಧ ಸ್ಥಳಗಳಲ್ಲಿ ನಡೆಸಿದ ಕಾರ್ಯಾಚರಣೆ ವೇಳೆ ಮೂವರು ಉಗ್ರರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಸತತ ವಿಚಾರಣೆಯ ನಂತರ ಈ ಮೂವರು ಉಗ್ರರು ಲಷ್ಕರ್-ಎ-ತೊಯ್ಬಾದ ಸಂಘಟನೆಗೆ ಸೇರಿದವರು ಎಂದು ತಿಳಿದುಬಂದಿದೆ. ಬಂಧಿತರಿಂದ ಮೂರು ಚೀನಾ ನಿರ್ಮಿತ ಪಿಸ್ತೂಲ್‌ಗಳು, ಮದ್ದುಗುಂಡುಗಳು ಹಾಗೂ ಇತರ ಅಪರಾಧ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಪೊಲೀಸರು ತಿಳಿಸಿದ್ದಾರೆ.