ಮನೆ ಅಪರಾಧ ಆ್ಯಸಿಡ್ ದಾಳಿ ಪ್ರಕರಣ: ಆರೋಪಿ ಪತ್ತೆಗೆ ಲುಕ್‌ಔಟ್‌ ನೋಟಿಸ್

ಆ್ಯಸಿಡ್ ದಾಳಿ ಪ್ರಕರಣ: ಆರೋಪಿ ಪತ್ತೆಗೆ ಲುಕ್‌ಔಟ್‌ ನೋಟಿಸ್

0

ಬೆಂಗಳೂರು(Bengaluru): ಪ್ರೀತಿ ನಿರಾಕರಿಸಿದ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿರುವ ಆರೋಪಿ ನಾಗರಾಜ್ ಪತ್ತೆಗೆ ಪೊಲೀಸರು ಲುಕ್‌ಔಟ್ ನೋಟಿಸ್ ಹೊರಡಿಸಲಾಗಿದೆ.

ಏಪ್ರಿಲ್ 28ರಂದು ಕೃತ್ಯ ಎಸಗಿದ್ದ ನಾಗರಾಜ್, ರಾಜ್ಯದಿಂದಲೇ ಪರಾರಿಯಾಗಿದ್ದಾನೆ. ಆತ ಎಲ್ಲಿದ್ದಾನೆ ಎಂಬ ಮಾಹಿತಿ ಲಭ್ಯವಾಗುತ್ತಿಲ್ಲ. ಆತನ ಪತ್ತೆಗಾಗಿ ವಿಶೇಷ ತಂಡಗಳು ತನಿಖೆ ಮುಂದುವರಿಸಿವೆ ಎಂದು ಪೊಲೀಸರು ಹೇಳಿದರು. ಗಾಯಗೊಂಡಿರುವ ಯುವತಿ, ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಣ್ಣದೊಂದು ಗಾರ್ಮೆಂಟ್ಸ್ ಕಾರ್ಖಾನೆ ನಡೆಸುತ್ತಿದ್ದ ನಾಗರಾಜ್, ವ್ಯವಸ್ಥಿತವಾಗಿ ಸಂಚು ರೂಪಿಸಿಯೇ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ. ಕನ್ನಡ, ತಮಿಳು, ತೆಲುಗು ಹಾಗೂ ಇತರೆ ಭಾಷೆಯಲ್ಲೂ ಕರಪತ್ರ ಮುದ್ರಿಸಿ ಎಲ್ಲ ರಾಜ್ಯಗಳಿಗೂ ಕಳುಹಿಸಲಾಗಿದೆ. ಲುಕ್‌ ಔಟ್ ನೋಟಿಸ್ ಹೊರಡಿಸಲಾಗಿದೆ ಎಂದೂ ಪೊಲೀಸರು ಹೇಳಿದರು.