ಮನೆ ರಾಜ್ಯ ಅರ್ಜುನನ ಸಾವಿನ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಅರ್ಜುನನ ಸಾವಿನ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

0

ಬೆಂಗಳೂರು:  ಕಾಡಾನೆ ಜೊತೆ ಕಾಳಗದ ವೇಳೆ ಮೃತಪಟ್ಟ  ಅರ್ಜುನ ಆನೆಯ ಸಾವಿನ ಕುರಿತು ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದ್ದು, ತನಿಖೆಗೆ ಆಗ್ರಹ ಕೇಳಿಬಂದ ಹಿನ್ನೆಲೆ ಅರ್ಜುನನ ಸಾವಿನ ಬಗ್ಗೆ ತನಿಖೆಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಅರ್ಜುನನ  ಸಾವಿನ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ. ಯಸಳೂರು ಬಳಿ ಅರ್ಜುನನ ಸ್ಮಾರಕ ನಿರ್ಮಿಸಬೇಕು.  ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಭ್ರೂಣ ಹತ್ಯೆ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಈಗಾಗಲೇ ಕೇಸ್ ಕುರಿತು ಸಿಐಡಿ ತನಿಖೆಯಾಗುತ್ತಿದೆ. ಪ್ರಕರಣದಲ್ಲಿ ಭಾಗಿಯಾದವರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ . ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.