ಮನೆ ರಾಜಕೀಯ ಅಮಿತ್ ಶಾ ಸಮ್ಮುಖದಲ್ಲಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ

ಅಮಿತ್ ಶಾ ಸಮ್ಮುಖದಲ್ಲಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ

0

ಬೆಂಗಳೂರು(Bengaluru): ಸಭಾಪತಿ ಹಾಗೂ ಜೆಡಿಎಸ್​​ನ ಹಿರಿಯ ನಾಯಕ ಬಸವರಾಜ ಹೊರಟ್ಟಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.

ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್‌ ಎಂಡ್ ಹೋಟೆಲ್​ಗೆ ಭೇಟಿ ನೀಡಿದ ಹೊರಟ್ಟಿ, ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಸೇರಿದ್ದಾರೆ. ಹಾವೇರಿ, ಧಾರವಾಡ, ಗದಗ, ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿ ಹೊಂದಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅಮಿತ್ ಶಾ ಒಪ್ಪಿಗೆ ನೀಡಿದ್ದು, ಹೊರಟ್ಟಿ ಅವರನ್ನು ಬಿಜೆಪಿಗೆ ಬರಮಾಡಿಕೊಳ್ಳಲಾಯಿತು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉತ್ತರ ಕರ್ನಾಟಕದಲ್ಲಿ ಪ್ರಬಲವಾಗಿರುವ ಪಕ್ಷಕ್ಕೆ ಹೊರಟ್ಟಿ ಸೇರ್ಪಡೆ ಮತ್ತಷ್ಟು ಶಕ್ತಿ ತುಂಬಿದೆ ಎಂದರು.

ಹೊರಟ್ಟಿ ಬಿಜೆಪಿಗೆ ಸೇರ್ಪಡೆಯಾಗುವ ವದಂತಿ ಹಿನ್ನೆಲೆಯಲ್ಲಿ ಖುದ್ದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾರ್ಚ್ 29 ರಂದು ಸಭಾಪತಿ ಬಸವರಾಜ ಹೊರಟ್ಟಿ ನಿವಾಸಕ್ಕೆ ಭೇಟಿ ನೀಡಿ, ಹೊರಟ್ಟಿ ಬಿಜೆಪಿಗೆ ಸೇರ್ಪಡೆಯಾಗುವ ವದಂತಿ ಕುರಿತು ಕೂಡಾ ಮಾತುಕತೆ ನಡೆಸಿ, ಮನವೊಲಿಕೆ ಪ್ರಯತ್ನ ಕೂಡ ಮಾಡಿದ್ದರು. ಆದರೆ ಬಿಜೆಪಿ ಸೇರ್ಪಡೆ ಬಗ್ಗೆ ಆರು ತಿಂಗಳ ಹಿಂದೆಯೇ ನಿರ್ಧರಿಸಿದ್ದ ಹೊರಟ್ಟಿ, ಹೆಚ್​ಡಿಕೆ ಮನವೊಲಿಕೆಗೆ ಒಪ್ಪದೆ ಇಂದು ಅಧಿಕೃತವಾಗಿ ಬಿಜೆಪಿ ಸೇರಿಕೊಂಡರು.