ಮನೆ ರಾಷ್ಟ್ರೀಯ ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 3.2 ತೀವ್ರತೆಯ ಭೂಕಂಪ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 3.2 ತೀವ್ರತೆಯ ಭೂಕಂಪ

0

ತಮಿಳುನಾಡು: ಚೆಂಗಲ್‌ ಪಟ್ಟು ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ ಸಿಎಸ್) ತಿಳಿಸಿದೆ.

ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರವು ಇಂದು ಬಿಡುಗಡೆ ಮಾಡಿದ ದೈನಂದಿನ ಹವಾಮಾನ ಬುಲೆಟಿನ್ ಪ್ರಕಾರ, ಚೆಂಗಲ್ಪಟ್ಟು ಜೊತೆಗೆ ಚೆನ್ನೈ ತಿರುವಳ್ಳೂರ್ ಮತ್ತು ಕಾಂಚೀಪುರಂನಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ.

ಮೇಘಾಲಯದಲ್ಲೂ ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆ ದಾಖಲಾಗಿದೆ. ಶಿಲ್ಲಾಂಗ್ ​ನಲ್ಲಿ 3.8 ತೀವ್ರತೆಯ ಭೂಕಂಪ ವರದಿಯಾಗಿದೆ. ಬೆಳಗ್ಗೆ 8.46ರ ಸಂದರ್ಭದಲ್ಲಿ ಭೂಕಂಪ ಸಂಭವಿಸಿದೆ. 9 ಗಂಟೆಯ ಸಮಯದಲ್ಲಿ ರಾಜ್​ ಕೋಟ್​ ಹಾಗೂ ಗುಜರಾತ್​ ನಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ.