ವಿಜಯಪುರ: ಧರ್ಮಗುರು ತನ್ವೀರ್ ಪೀರಾ ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದಾರೆ. ಅವರ ಹೆಸರನ್ನು ಚಾರ್ಜ್ ಶೀಟ್’ನಿಂದ ಕೈಬಿಟ್ಟಿರುವುದೇಕೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಶ್ನಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ, “ತನ್ವೀರ್ ಪೀರಾ ಕೊಲೆ ಕೇಸ್ ಒಂದರಲ್ಲಿ ಆರೋಪಿತನಾಗಿದ್ದು, ಕೊಲೆಯಾದ ವ್ಯಕ್ತಿಯ ಪತ್ನಿಯು ಸಾಕ್ಷಿ ನಾಶ ಮಾಡುವುದಲ್ಲದೆ, ನಮ್ಮ ಕುಟುಂಬಕ್ಕೆ, ಕಾರ್ಯಕರ್ತರಿಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿರುವ ಪತ್ರ” ಸಮೇತ ಟ್ವೀಟ್ ಮಾಡಿದ್ದಾರೆ.
“ಕೊಲೆ ಪ್ರಕರಣದಲ್ಲಿ ಈತನ ಮೇಲೆ ಪೊಲೀಸರು ಹಾಕಿದ್ದ ದೋಷಾರೋಪ ಪಟ್ಟಿ (ಚಾರ್ಜಶೀಟ್) ನಿಂದ ಈತನ ಹೆಸರು ಕೈಬಿಟ್ಟಿದ್ದು ಏಕೆ ? ಯಾರ ಒತ್ತಡದಿಂದ ಈತನ ಹೆಸರನ್ನು ಚಾರ್ಜಶೀಟ್ನಿಂದ ತೆಗಿಸಲಾಯಿತು? ತನಿಖೆ ವೇಳೆ ಕೊಲೆಯಲ್ಲಿ ಈತ ಭಾಗಿಯಾಗಿದ್ದ ಎಂಬ ಶಂಕೆಯಿಂದ ಚಾರ್ಜಶೀಟ್ ನಲ್ಲಿ ಮೊದಲು ಈತನ ಹೆಸರನ್ನು ಹಾಕಿ, ನಂತರ ತೆಗೆದು ಹಾಕಿದ್ದು ಯಾರ ಒತ್ತಡದಿಂದ ಎಂದು ಸರ್ಕಾರ ಹೇಳಲಿ” ಎಂದು ಒತ್ತಾಯಿಸಿದರು.
ವೇದಿಕೆ ಮೇಲೆ ಕೊಲೆ ಆರೋಪಿತನಿಗೆ ಏನು ಕೆಲಸ ? ಇವನನ್ನು ವೇದಿಕೆ ಮೇಲೆ ಏಕೆ ಬಿಟ್ಟರು ? ಒಂದು ಬಡ ಕುಟುಂಬಕ್ಕೆ ಬೆದರಿಕೆ ಒಡ್ಡುವ ವ್ಯಕ್ತಿ ಅಥವಾ ವ್ಯಕ್ತಿಗಳೊಂದಿಗೆ ವೇದಿಕೆ ಹಂಚಿಕೊಳ್ಳುವ ಅವಶ್ಯಕತೆ ಏನಿತ್ತು? ಈತನ ಬಗ್ಗೆ ಇನ್ನಷ್ಟು ಮಾಹಿತಿ ಅತಿ ಶೀಘ್ರದಲ್ಲೇ ಹಂಚಿಕೊಳ್ಳಲಿದ್ದೇನೆ. ಈತ ದೇಶದಿಂದ ಕಾಲ್ಕಿತ್ತುವ ಸಾಧ್ಯತೆಗಳಿದ್ದು, ಪೊಲೀಸರು ಹಾಗೂ ಗುಪ್ತಚರ ಇಲಾಖೆ ತನ್ವೀರ್ ಪೀರಾನ ಮೇಲೆ ನಿಗಾ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.