ಮನೆ ರಾಜಕೀಯ ನಾಯಕತ್ವ ಬದಲಾವಣೆ ಕಪೋಲಕಲ್ಪಿತ: ಅರುಣ್ ಸಿಂಗ್

ನಾಯಕತ್ವ ಬದಲಾವಣೆ ಕಪೋಲಕಲ್ಪಿತ: ಅರುಣ್ ಸಿಂಗ್

0

ಬೆಂಗಳೂರು,: ರಾಜ್ಯದಲ್ಲಿ ಸಿಎಂ ಬದಲಾವಣೆ ಕಪೋಲ ಕಲ್ಪಿತ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತೆರೆ ಎಳೆದಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಪ್ರಶ್ನೆಗೆ ಉತ್ತರಿಸಲ್ಲ. ಬೊಮ್ಮಾಯಿ ಕಾಮನ್ ಮ್ಯಾನ್ ಸಿಎಂ.  ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರೇ ಸಿಎಂ ಆಗಲಿ ಎಂದು ಜನರು ಬಯಸುತ್ತಿದ್ದಾರೆ.  ಮುಂದಿನ ಚುನಾವಣೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ ನಡೆಯಲಿದೆ. ಮುಂದೆ ಬೊಮ್ಮಾಯಿ ಸಿಎಂ ಆಗಲಿದ್ದಾರೆ ಎಂದರು.

ನರೇಂದ್ರ ಮೋದಿ ನಾಯಕತ್ವದಲ್ಲಿ ಒಳ್ಳೇ ಆಡಳಿತ ನೀಡುತ್ತಿದ್ದಾರೆ. ಇನ್ನು ರಾಜ್ಯದಲ್ಲಿ ಸಂಫುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದು ಅರುಣ್ ಸಿಂಗ್ ತಿಳಿಸಿದರು.