ಮನೆ ಅಪರಾಧ ಮಂಡ್ಯ:  ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಮಂಡ್ಯ:  ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

0

ಮಂಡ್ಯ: ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯಜಿಲ್ಲೆ  ಶ್ರೀರಂಗಪಟ್ಟಣ ತಾಲೂಕಿನ ಕಾರೆಕುರ ಗ್ರಾಮದ ಬಳಿ ನಡೆದಿದೆ.

ಯೋಗೇಶ್ (34) ಬರ್ಬರವಾಗಿ ಹತ್ಯೆಯಾದ ವ್ಯಕ್ತಿ.

ನಿನ್ನೆ ರಾತ್ರಿ ಘಟನೆ ನಡೆದಿದೆ ಎನ್ನಲಾಗಿದ್ದು, ಪೈಂಟ್ ಕೆಲಸ ಮಾಡಿಕೊಂಡಿದ್ದ ಯೋಗೇಶ್ ನನ್ನು

ಹಳೇ ವೈಷಮ್ಯಕ್ಕೆ  ಕೊಲೆ  ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಕೆಆರ್ ಎಸ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೆ.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.