ಮನೆ ರಾಜ್ಯ ರಾಜ್ಯದಲ್ಲಿ 107 ಮಂದಿಗೆ ಕೊರೊನಾ ಸೋಂಕು

ರಾಜ್ಯದಲ್ಲಿ 107 ಮಂದಿಗೆ ಕೊರೊನಾ ಸೋಂಕು

0

ಬೆಂಗಳೂರು (Bengaluru)-ರಾಜ್ಯದಲ್ಲಿ ಕೊರೊನಾ (Corona) ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 107 ಮಂದಿಗೆ ಕೊರೊನಾ ಪಾಸಿಟಿವ್‌ ಆಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,47,944ಕ್ಕೆ ಏರಿಕೆಯಾಗಿದೆ.

ಇನ್ನೂ ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40060 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

107 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,06027ಕ್ಕೆ ಏರಿಕೆಯಾಗಿದೆ. ಇನ್ನು 1815 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 100 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,82,880ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಕೊರೊನಾ ಸಾವು ವರದಿಯಾಗಿಲ್ಲ.