ಬೆಳಗಾವಿ: ತಾಲ್ಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದರಿಂದ ಗಾಯಗೊಂಡ ಮಹಿಳೆಯನ್ನು ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ದೌಡಾಯಿಸಿದ ಗೃಹಸಚಿವ ಡಾ.ಜಿ.ಪರಮೇಶ್ವರ ಮಹಿಳೆ ಆರೋಗ್ಯ ವಿಚಾರಿಸಿದರು.
ಮಹಿಳೆ ಆರೋಗ್ಯದ ಸ್ಥಿತಿ ಕುರಿತು ವೈದ್ಯರಿಂದ ಮಾಹಿತಿ ಪಡೆದರು. ಅವರ ಮೇಲೆ ನಿಗಾ ವಹಿಸುವಂತೆ ಅವರು ಸೂಚನೆ ನೀಡಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಪರಮೇಶ್ವರ, ‘ಮಹಿಳೆಯನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿ ಹೊಡೆಯಲಾಗಿದೆ. ಇದೊಂದು ಅಮಾನವೀಯ ಘಟನೆ. ನಡೆಯಬಾರದು ನಡೆದಿದೆ. 24 ವರ್ಷದ ಯುವಕ ದುಂಡಪ್ಪ ಹಾಗೂ ಪ್ರಿಯಾಂಕ ಎಂಬ ಯುವತಿಯ ಪ್ರೇಮ ಪ್ರಕರಣ ಇದಕ್ಕೆ ಕಾರಣವಾಗಿದೆ. 8ರಿಂದ 10 ಜನ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ. ಈಗಾಗಲೇ 7 ಮಂದಿಯನ್ನು ಬಂಧಿಸಲಾಗಿದೆ. ಇನ್ನಿಬ್ಬರ ಹುಡುಕಾಟ ನಡೆದಿದೆ. ಪೊಲೀಸರು ತುರ್ತು ಕ್ರಮ ಜರುಗಿಸಿದ್ದಾರೆ ಎಂದರು.
ಓಡಿ ಹೋದ ಹುಡುಗ– ಹುಡುಗಿಯ ಬಗ್ಗೆಯೂ ಕಾಳಜಿ ವಹಿಸಬೇಕಿದೆ. ಅವರನ್ನು ಪೊಲೀಸರು ಹುಡುಕಾಡುತ್ತಿದ್ದಾರೆ ಎಂದರು.
ಇದು ಇಷ್ಟೊಂದು ದೀರ್ಘಕ್ಕೆ ಹೋಗಬಾರದಿತ್ತು. ಪ್ರೇಮ ಪ್ರಕರಣದ ಬಗ್ಗೆ ಮನೆಯ ಹಿರಿಯರು ಅಥವಾ ಗ್ರಾಮದ ಮುಖಂಡರು ಮಾತನಾಡಿ ಬಗೆಹರಿಸಬೇಕಿತ್ತು. ಯುವಕ– ಯುವತಿ ಪೊಲೀಸರಿಗೆ ದೂರು ನೀಡಿದ್ದರೂ ಸಮಸ್ಯೆ ಬಗೆಹರಿಸಬಹುದಿತ್ತು ಎಂದರು.
ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ರಾಮಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.