ಮನೆ ಸ್ಥಳೀಯ ಆರ್ಟಿಕಲ್ 370 ರದ್ದು: ಸುಪ್ರೀಂ ಕೋರ್ಟ್ ತೀರ್ಪಿನಿಂದ ಕಾಂಗ್ರೆಸ್ ಗೆ ಮುಖಭಂಗವಾಗಿದೆ ಎಂದ ಪ್ರಮೋದ್ ಮುತಾಲಿಕ್

ಆರ್ಟಿಕಲ್ 370 ರದ್ದು: ಸುಪ್ರೀಂ ಕೋರ್ಟ್ ತೀರ್ಪಿನಿಂದ ಕಾಂಗ್ರೆಸ್ ಗೆ ಮುಖಭಂಗವಾಗಿದೆ ಎಂದ ಪ್ರಮೋದ್ ಮುತಾಲಿಕ್

0

ಮೈಸೂರು: ಆರ್ಟಿಕಲ್ 370 ರದ್ದು ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವ ವಿಚಾರಕ್ಕೆ ಶ್ರೀ ರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹರ್ಷ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಗೆ ಮುಖಭಂಗವಾಗಿದೆ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ದೇಶದ 140 ಕೋಟಿ ಜನರಿಗೂ ಹರ್ಷ ತಂದಿದೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗವಾಗಿದೆ. ಅಧಿಕಾರಕ್ಕೆ ಬಂದರೆ 370 ವಿಧಿ ಮರು ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿತ್ತು. ಇದೀಗ ನ್ಯಾಯಾಲಯ ನೀಡಿರುವ ತೀರ್ಪಿನಿಂದ ಕಾಂಗ್ರೆಸ್ ಮುಖಭಂಗಕ್ಕೀಡಾಗಿದೆ ಎಂದರು.

370ನೇ ವಿಧಿ ರದ್ದಾದ ಬಳಿಕ ಜಮ್ಮು ಕಾಶ್ಮೀರದಲ್ಲಿ ಶಾಂತಿ ಮರುಕಳಿಸಿದೆ. ಸಣ್ಣಪುಟ್ಟ ಭಯೋತ್ಪಾದನೆ ಕೃತ್ಯಗಳು ನಡೆಯುತ್ತಿವೆಯಷ್ಟೆ. ಕಲ್ಲು ಹೊಡೆಯುತ್ತಿದ್ದವರು ಕಾಲೇಜಿಗೆ ಹೋಗುತ್ತಿದ್ದಾರೆ‌. ಅಲ್ಲಿನ ಪ್ರವಾಸೋದ್ಯಮ ಅಭಿವೃದ್ಧಿಯಾಗುತ್ತಿದೆ. ಇದಕ್ಕೆ ಕಾರಣರಾದ ಕೇಂದ್ರ ಸರ್ಕಾರ ಹಾಗು ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಮೋದ್ ಮುತಾಲಿಕ್ ಹೇಳಿದರು.