ಮನೆ ಅಪರಾಧ ಸಾರಿಗೆ ಬಸ್‌ಗೆ ಸಿಲುಕಿ ಮಹಿಳೆ ಸಾವು

ಸಾರಿಗೆ ಬಸ್‌ಗೆ ಸಿಲುಕಿ ಮಹಿಳೆ ಸಾವು

0

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ ಮಹಿಳೆ ಸಾವಿಗೀಡಾಗಿರುವ ಘಟನೆ ಮಂಡ್ಯದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬೆಳಗ್ಗೆ ನಡೆದಿದೆ. ಚಾಲಕನ ನಿರ್ಲಕ್ಷ್ಯದಿಂದ ಮಹಿಳೆ ಮೃತಪಟ್ಟಿದ್ದಾರೆ ಎನ್ನಲಾಗ್ತಿದೆ.

ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ  ಪೂಜಾ ಭಾರತಿ ಮೃತಪಟ್ಟಿದ್ದ ಮಹಿಳೆಯಾಗಿದ್ದಾರೆ. ಬಸ್ ನಿಲ್ದಾಣದ ಒಳಗಡೆ ಪ್ರವೇಶ ಮಾಡುವಾಗ ಬಸ್ ಚಕ್ರಕ್ಕೆ ಸಿಲುಕಿ ಸಾವಿಗೀಡಾಗಿದ್ದಾರೆ.

 ಕೆಎಸ್‌ಆರ್‌ಟಿಸಿ  ಬಸ್ ನಿಲ್ದಾಣದ ಒಳಗಡೆ ಮಹಿಳೆ ನಡೆದುಕೊಂಡು ಬರುತ್ತಿದ್ದರು.ಏಕಾಏಕಿ ಮಹಿಳೆಗೆ ಬಸ್‌ ಗುದ್ದಿದ ಪರಿಣಾಮ ಬಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.

ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಪಘಾತದ ಬಗ್ಗೆ ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ಧಾರೆ.

ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದ್ದು,ಈ ಸಂಬಂಧ ಕೆಎಸ್‌ಆರ್‌ಟಿಸಿ ಬಸ್ ಡ್ರೈವರ್ ಚಂದುಕುಮಾರ್‌ನನ್ನು ಪಶ್ಚಿಮ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು,

ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.