ಮದುವೆಯಾದ ಏಳು ವರ್ಷಗಳೊಳಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಮಾತ್ರಕ್ಕೆ, ಭಾರತೀಯ ಸಾಕ್ಷ್ಯ ಕಾಯಿದೆಯ ಸೆಕ್ಷನ್ 113 ಎ ಅಡಿ ಆಕೆಯ ಪತಿ ಅಥವಾ ಅತ್ತೆ ಮಾವಂದಿರನ್ನು ಅಪರಾಧಿಗಳು ಎಂದು ತನ್ನಿಂತಾನೇ ಪರಿಗಣಿಸಲಾಗದು ಎಂಬುದಾಗಿ ಕಲ್ಕತ್ತಾ ಹೈಕೋರ್ಟ್ ತೀರ್ಪು ನೀಡಿದೆ.
ವಿವಾಹಿತ ಮಹಿಳೆ ಮದುವೆಯಾದ ಏಳು ವರ್ಷಗಳ ಒಳಗೆ ಸಾವನ್ನಪ್ಪಿದರೆ ಮತ್ತು ಆ ಸಮಯದಲ್ಲಿ ಅವಳು ಕ್ರೌರ್ಯಕ್ಕೆ ಒಳಗಾಗಿದ್ದರೆ ಆಕೆಯ ಪತಿ ಮತ್ತು ಅತ್ತೆ ಮಾವಂದಿರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಊಹಿಸಬಹುದು ಎನ್ನುತ್ತದೆ ಸೆಕ್ಷನ್ 113 ಎ.
ಪತ್ನಿ ಕ್ರೌರ್ಯಕ್ಕೆ ಒಳಗಾಗಿದ್ದಾಳೆ ಎಂದು ತೋರಿಸಲು ಮೇಲ್ನೋಟದ ಪುರಾವೆಗಳು ಇದ್ದಾಗ ಮಾತ್ರ ಸೆಕ್ಷನ್ 113 ಎ ಅಡಿಯಲ್ಲಿ ಇದು ಅಪರಾಧವಾಗುತ್ತದೆ ಎಂದು ನ್ಯಾಯಮೂರ್ತಿ ರಾಯ್ ಚಟ್ಟೋಪಾಧ್ಯಾಯ ವಿವರಿಸಿದರು.
“ಆರೋಪಪಟ್ಟಿಯಲ್ಲಿರುವ ಆರೋಪಿಗಳು ಪತ್ನಿಯನ್ನು ಕ್ರೌರ್ಯಕ್ಕೆ ಒಳಪಡಿಸಿದ್ದಾರೆ ಎಂದು ಮೇಲ್ನೋಟಕ್ಕೆ ಸಾಬೀತಾಗದ ಹೊರತು ಮದುವೆಯಾದ ದಿನದಿಂದ ಏಳು ವರ್ಷದೊಳಗೆ ಆತ್ಮಹತ್ಯೆ ಮಾಡಿಕೊಂಡಾಕೆಯನ್ನು ಕೇವಲ ಕಾಯಿದೆಯ ಊಹೆಯಡಿ ತರಲಾಗದು ” ಎಂದು ಅವರು ಹೇಳಿದರು.
ಪತ್ನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ ಆರೋಪ ಹೊತ್ತಿದ್ದ ಪತಿ ಮತ್ತು ಆತನ ಸಂಬಂಧಿಕರಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ರದ್ದುಪಡಿಸಿದ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಪತಿ ಮತ್ತು ಸಂತ್ರಸ್ತೆಯ ನಡುವಿನ ವಿವಾಹದ ಅವಧಿ ಏಳು ವರ್ಷಗಳನ್ನು ಮೀರಬಾರದು ಎಂಬ ಸೆಕ್ಷನ್ 113 ಎ ಅಡಿಯ ಊಹೆ ಆಧಾರದ ಮೇಲೆ ಸರಳವಾಗಿ ಮುಂದುವರೆಯುವ ಮೂಲಕ ವಿಚಾರಣಾ ನ್ಯಾಯಾಲಯ ಎಡವಿದೆ ಎಂದು ಹೈಕೋರ್ಟ್ ಹೇಳಿದೆ.
ಹೀಗಾಗಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 498 ಎ (ಕ್ರೌರ್ಯ) ಮತ್ತು 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪತಿ ಕೃಷ್ಣಪಾದ ಮಹತೋ ಮತ್ತು ಅವರ ಕುಟುಂಬ ಸದಸ್ಯರಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಪೀಠ ರದ್ದುಗೊಳಿಸಿತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.