ಮನೆ ಕ್ರೀಡೆ ಮೂರನೇ ಟಿ20 ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 106 ರನ್ ಭರ್ಜರಿ ಜಯ

ಮೂರನೇ ಟಿ20 ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 106 ರನ್ ಭರ್ಜರಿ ಜಯ

0

ಜೋಹಾನ್ಸ್ಬರ್ಗ್ : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಟಿ-20 ಸರಣಿ 1-1 ರಿಂದ ಸಮಬಲಗೊಂಡಿದೆ. ಎರಡನೇ ಪಂದ್ಯದಲ್ಲಿ ಹೀನಾಯವಾಗಿ ಸೋತು ಹಿನ್ನಡೆಯಲ್ಲಿದ್ದ ಭಾರತ ಮೂರನೇ ಮತ್ತು ಕೊನೆಯ ಪಂದ್ಯದಲ್ಲಿ ಕಮ್ಬ್ಯಾಕ್ ಮಾಡಿದ್ದು, ನಾಯಕ ಸೂರ್ಯಕುಮಾರ್ ಮತ್ತು ಕುಲದೀಪ್ ಯಾದವ್ ಭರ್ಜರಿ ಪ್ರದರ್ಶನದಿಂದ 106 ರನ್ ಗಳ ಗೆಲುವು ದಾಖಲಿಸಿದೆ.

ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದರು. ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಸೂರ್ಯಕುಮಾರ್ ಯಾದವ್ (100) ಅವರ ಈ ಶತಕದ ನೆರವಿನಿಂದ ಟೀಮ್ ಇಂಡಿಯಾ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿತು.

202 ರನ್ ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 13.5 ಓವರ್ ಗಳಲ್ಲಿ 95 ರನ್ ಗಳಿಗೆ ಆಲೌಟ್ ಮಾಡುವ ಮೂಲಕ ಭಾರತ 106 ರನ್ ಗಳ ಭರ್ಜರಿ ಜಯ ಸಾಧಿಸಿದೆ. ಟೀಮ್ ಇಂಡಿಯಾ ಪರ ಕುಲ್ದೀಪ್ ಯಾದವ್ 2.5 ಓವರ್ ಗಳಲ್ಲಿ ಕೇವಲ 17 ರನ್ ನೀಡಿ 5 ವಿಕೆಟ್ ಕಬಳಿಸಿದರು.

ಸೌತ್ ಆಫ್ರಿಕಾ ತಂಡ : ರೀಝ ಹೆಂಡ್ರಿಕ್ಸ್, ಮ್ಯಾಥ್ಯೂ ಬ್ರೀಟ್ಝ್ಕೆ, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಡೊನೊವನ್ ಫೆರೆರಾ, ಆಂಡಿಲ್ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್, ಲಿಜಾದ್ ವಿಲಿಯಮ್ಸ್, ತಬ್ರೈಝ್ ಶಮ್ಸಿ, ನಾಂಡ್ರೆ ಬರ್ಗರ್.

ಭಾರತ ತಂಡ : ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮುಕೇಶ್ ಕುಮಾರ್.