ಮನೆ ಸ್ಥಳೀಯ ಕೂಸಿನ ಮನೆ ಉದ್ಘಾಟಿಸಿದ ಡಾ.ಯತೀಂದ್ರ ಸಿದ್ದರಾಮಯ್ಯ

ಕೂಸಿನ ಮನೆ ಉದ್ಘಾಟಿಸಿದ ಡಾ.ಯತೀಂದ್ರ ಸಿದ್ದರಾಮಯ್ಯ

0

ಮೈಸೂರು: ಗ್ರಾಮೀಣ ಪ್ರದೇಶದಲ್ಲಿ ಕೂಲಿಕಾರರು ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ಅವರ ಮಕ್ಕಳ ಸುರಕ್ಷತೆ ಮತ್ತು ಪೋಷಣೆಗೆ ಕೂಸಿನ ಮನೆ ಅಗತ್ಯವಿದೆ ಎಂದು ಮಾಜಿ ಶಾಸಕರು ಹಾಗೂ ಆಶ್ರಯ ಸಮಿತಿಯ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯರವರು ಹೇಳಿದರು.

ನಂಜನಗೂಡು ತಾಲ್ಲೂಕಿನ ತಾಂಡವಪುರ ಗ್ರಾಮ ಪಂಚಾಯಿತಿ ಪಕ್ಕದಲ್ಲಿರುವ ಹಳೆಯ ಸರ್ಕಾರಿ ಶಾಲಾ ಕಟ್ಟಡದಲ್ಲಿ ವ್ಯವಸ್ಥಿತವಾಗಿ ಸಿದ್ದಗೊಂಡಿರುವ  ಕೂಸಿನ ಮನೆ ಉದ್ಘಾಟಿಸಿ ಅವರು ಮಾತನಾಡಿದರು.  ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲು ಮತ್ತು ನರೇಗಾ ಯೋಜನೆಯಡಿ ಮಹಿಳೆಯರು ಕೂಲಿ ಕೆಲಸ ನಿರ್ವಹಿಸಲು ಪೂರಕ ವಾತಾವರಣ ಹಾಗೂ ಸೌಕರ್ಯ ಕಲ್ಪಿಸುವುದರ ಜತೆಗೆ ಅವರ ಮಕ್ಕಳ ಆರೋಗ್ಯ ಪೌಷ್ಟಿಕತೆ ಮತ್ತು ಸುರಕ್ಷತೆಗೆ ಕೂಸಿನ ಮನೆ ನೆರವಾಗಲಿದೆ ಎಂದರು. ಈ ವೇಳೆ ಕೂಸಿನ ಮನೆ ಮಕ್ಕಳಿಗೆ ಸಿಹಿ ತಿನಿಸಿ ಶುಭ ಹಾರೈಸಿದರು. 

ನಂತರ ಕೂಸಿನ ಮನೆ ಪಕ್ಕದಲ್ಲಿ ನೂತನವಾಗಿ ನಿರ್ಮಿಸಿರುವ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿದರು.

ಈ ವೇಳೆ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್,  ನರೇಗಾ ಯೋಜನೆಯ ಸಹಾಯಕ ನಿರ್ದೇಶಕರಾದ ಶಿವಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾಗಮ್ಮ, ಉಪಾಧ್ಯಕ್ಷರಾದ ಬಿ.ಶಿವಣ್ಣ, ಗ್ರಾಮ ಪಂಚಾಯಿತಿ ಸದಸ್ಯರುಗಳು ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.