ಮೈಸೂರು: ಭ್ರೂಣ ಪತ್ತೆ, ಹತ್ಯೆ ಪ್ರಕರಣ ಸಂಬಂಧ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಮೈಸೂರಿನಲ್ಲಿ ವೈದ್ಯಕೀಯ ಪ್ರಮಾಣಪತ್ರ ಇಲ್ಲದ 14 ಕ್ಲಿನಿಕ್ ಗಳಿಗೆ ಬೀಗ ಹಾಕಲಾಗಿದೆ.
ಜಿಲ್ಲಾ ಟಾಸ್ಕ್ ಫೋರ್ಸ್ ತಂಡ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಜಿಲ್ಲೆಯಲ್ಲಿನ ನರ್ಸಿಂಗ್ ಹೋಂ ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದ್ದು, ಸೂಕ್ತ ದಾಖಲಾತಿ ಇಲ್ಲದ ಕ್ಲಿನಿಕ್‌ಗಳಿಗೆ ಅಧಿಕಾರಿಗಳು ನೋಟಿಸ್ ಕಳಿಸುತ್ತಿದ್ದಾರೆ.