ಮನೆ ರಾಜಕೀಯ ರಾಜ್ಯಸಭೆಯಲ್ಲಿ ಎಎಪಿ ಪಕ್ಷದ ನಾಯಕನಾಗಿ ರಾಘವ್ ಚಡ್ಡಾ ನೇಮಕ

ರಾಜ್ಯಸಭೆಯಲ್ಲಿ ಎಎಪಿ ಪಕ್ಷದ ನಾಯಕನಾಗಿ ರಾಘವ್ ಚಡ್ಡಾ ನೇಮಕ

0

ದೆಹಲಿ: ರಾಜ್ಯಸಭೆಯಲ್ಲಿ ಎಎಪಿ ಪಕ್ಷದ ನಾಯಕನಾಗಿ ಸಂಸದ ರಾಘವ್ ಚಡ್ಡಾ ಅವರನ್ನು ಪಕ್ಷ ನೇಮಿಸಿದೆ.

ಈ ಹಿಂದೆ ಸಂಜಯ್ ಸಿಂಗ್ ಅವರು ರಾಜ್ಯಸಭೆಯಲ್ಲಿ ಎಎಪಿ ನಾಯಕನಾಗಿದ್ದರು. ಆದರೆ ಅವರ ಅನುಪಸ್ಥಿತಿಯಿಂದ ರಾಜ್ಯಸಭೆಯಲ್ಲಿ ಎಎಪಿ ಪಕ್ಷದ ನಾಯಕನಾಗಿ ಸಂಸದ ರಾಘವ್ ಚಡ್ಡಾ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ ರಾಜ್ಯಸಭೆ ಸಭಾಧ್ಯಕ್ಷರಿಗೆ ಪತ್ರ ಬರೆಯಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿದೆ.

ಎಎಪಿ ಸಂಸದ ಸಂಜಯ್ ಸಿಂಗ್ ಸದ್ಯ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಈ ಕಾರಣದಿಂದ ರಾಜ್ಯಸಭೆಯಲ್ಲಿ ಎಎಪಿ ಪಕ್ಷದ ನಾಯಕ ಇಲ್ಲದಂತಾಗಿತ್ತು. ಇದನ್ನು ಗಮನಿಸಿ ಪಕ್ಷದ ವರಿಷ್ಠರು ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯ ನಾಯಕನಾಗಿ ನೇಮಿಸಿದೆ. ಈ ಮನವಿಗೆ ರಾಜ್ಯಸಭೆ ಸಭಾಧ್ಯಕ್ಷರು ಕೂಡ ಒಪ್ಪಿಗೆಯನ್ನು ಸೂಚಿಸಿದ್ದಾರೆ.

ಚಡ್ಡಾ ರಾಜ್ಯಸಭೆಯ ಕಿರಿಯ ಸದಸ್ಯರಲ್ಲಿ ಒಬ್ಬರು. ಪ್ರಸ್ತುತ ಮೇಲ್ಮನೆಯಲ್ಲಿ ಎಎಪಿ ಒಟ್ಟು 10 ಸಂಸದರನ್ನು ಹೊಂದಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಟಿಎಂಸಿ ನಂತರ ಎಎಪಿ ರಾಜ್ಯಸಭೆಯಲ್ಲಿ ನಾಲ್ಕನೇ ದೊಡ್ಡ ಪ್ರಬಲ ಪಕ್ಷವಾಗಿ ಹೊರಹೊಮ್ಮಿದೆ.