ಮನೆ ಕ್ರೀಡೆ ಮೊದಲ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ

ಮೊದಲ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ

0

ಜೋಹಾನ್ಸ್ಬರ್ಗ್ (ದಕ್ಷಿಣ ಆಫ್ರಿಕಾ): ನ್ಯೂ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆದ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಗೆಲುವಿನ ನಗೆ ಬೀರಿದೆ.

ದಕ್ಷಿಣ ಆಫ್ರಿಕಾ  ನೀಡಿದ 117 ರನ್ ಗಳ ಟಾರ್ಗೆಟ್ ಬೆನ್ನಟ್ಟಿದ ಭಾರತ ಕೇವಲ 16.4 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 27.3 ಓವರ್ ಗಳಲ್ಲಿ 116 ರನ್ ಗಳಿಸಿ ಸೌತ್ ಆಫ್ರಿಕಾ ಆಲೌಟ್ ಆಯಿತು. ಟೀಮ್ ಇಂಡಿಯಾ ಪರ ಅರ್ಷದೀಪ್ ಸಿಂಗ್ 10 ಓವರ್ ಗಳಲ್ಲಿ 37 ರನ್ ನೀಡಿ 5 ವಿಕೆಟ್ ಪಡೆದರೆ, ಅವೇಶ್ ಖಾನ್ 8 ಓವರ್ ಗಳಲ್ಲಿ 27 ರನ್ ನೀಡಿ 4 ವಿಕೆಟ್ ಕಬಳಿಸಿದರು. ಹಾಗೆಯೇ ಒಂದು ವಿಕೆಟ್ ಕುಲ್ದೀಪ್ ಯಾದವ್ ಪಾಲಾಯಿತು.

ಇನ್ನು 117 ರನ್ ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 16.4 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 117 ರನ್ ಗಳ ಗುರಿ ಮುಟ್ಟುವ ಮೂಲಕ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.

ಭಾರತ ತಂಡ : ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್.

ಸೌತ್ ಆಫ್ರಿಕಾ ತಂಡ : ರೀಝ ಹೆಂಡ್ರಿಕ್ಸ್, ಟೋನಿ ಡಿ ಜೋರ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್ , ಆಂಡಿಲೆ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್, ನಾಂದ್ರೆ ಬರ್ಗರ್, ತಬ್ರೇಝ್ ಶಮ್ಸಿ.