ಕುಶಾಲನಗರ: ನೆರೆ ರಾಜ್ಯ ಕೇರಳದಲ್ಲಿ ಕೊರೊನಾ ವೈರಸ್ ರೂಪಾಂತರಿ ಜೆಎನ್.1 (JN.1) ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದ್ದು, ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಲಾಗುತ್ತಿದೆ. ಆದರೆ, ಯಾವುದೇ ನಿರ್ಬಂಧ ಹೇರುವ ಯೋಚನೆ ಸದ್ಯಕ್ಕಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ಹೇಳಿದರು.
ಕೊಡಗು ಜಿಲ್ಲೆ ಕುಶಾಲನಗರದಲ್ಲಿ ಮಾತನಾಡಿದ ಅವರು, ಕೊರೊನಾ ರೂಪಾಂತರಿ ಬಗ್ಗೆ ಯಾರೂ ಸಹ ಆತಂಕಪಡಬೇಕಿಲ್ಲ. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಹೃದಯ ಸಂಬಂಧಿ ಸಮಸ್ಯೆ ಇದ್ರೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು.
ಕೊರೊನಾ ಲಕ್ಷಣ ಇದ್ದರೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ರಾಜ್ಯದಲ್ಲಿ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಸಭೆ ಮಾಡಿ ಚರ್ಚೆ ಮಾಡಿದ್ದೇವೆ. ಕೇಂದ್ರ ಸರ್ಕಾರ ಹಾಗೂ ತಜ್ಞರ ಜೊತೆ ಕೂಡ ಚರ್ಚೆ ಮಾಡಲಾಗಿದೆ. ಹೆಚ್ಚು ಸೋಂಕು ಪತ್ತೆ ಪರೀಕ್ಷೆ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ. ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಆಕ್ಸಿಜನ್ ಸಿದ್ಧವಾಗಿಡಲಾಗಿದೆ. ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದರು.
ಶೀತ, ಜ್ವರ ಕೆಮ್ಮು ಇರುವವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕು. ಹೆಚ್ಚು ಪಾಸಿಟಿವ್ ಬಂದರಷ್ಟೇ ನಿಷೇಧ, ನಿರ್ಬಂಧ ಇತ್ಯಾದಿ ಕ್ರಮಗಳ ಬಗ್ಗೆ ಯೋಚನೆ ಮಾಡುತ್ತೇವೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.