ಬೆಂಗಳೂರು: ವಾಹನ ಸವಾರರು ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಸಂಚಾರಿ ಪೊಲೀಸರು ಯಾವುದೇ ಸಂದರ್ಭದಲ್ಲಿ ವಾಹನ ಸವಾರರಿಂದ ದಂಡದ ಮೊತ್ತ ಸಂಗ್ರಹಿಸುವ ಅವಕಾಶವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.
ಹೆಲ್ಲೆಟ್ ಧರಿಸದೇ ಇರುವುದಕ್ಕೆ ದಂಡಪಾವತಿಸಲು ನಿರಾಕರಿಸಿದ ಮತ್ತು ಬಲಪ್ರಯೋಗ ನಡೆಸಿ ಸರ್ಕಾರಿ ಅಧಿಕಾರಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದ ಆರೋಪ ಸಂಬಂಧ ತಮ್ಮ ವಿರುದ್ಧದ ದೋಷಾರೋಪ ಪಟ್ಟಿ ರದ್ದು ಮಾಡುವಂತೆ ಕೋರಿ ಕೆ.ಆರ್.ಪೇಟೆ ಪಟ್ಟಣದ ಸುಭಾಷ್ ನಗರದ ನಿವಾಸಿ ಕೆ.ಟಿ.ನಟರಾಜು ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಹೇಮಂತ್ ಚೆಂದನ್ ಗೌಡರ್ ಅವರ ಪೀಠ ಈ ಆದೇಶ ಮಾಡಿದೆ.
ಸಂಚಾರ ನಿಯಮ ಉಲ್ಲಂ ಘಿಸುವ ಪ್ರಕರಣಗಳಲ್ಲಿ ಪೊಲೀಸರು ತಪಾಸಣೆ ಮಾಡುವುದನ್ನು ವಿಡಿಯೋ ಚಿತ್ರೀಕರಣ ಮಾಡಬೇಕಾಗುತ್ತದೆ ಹಾಗೂ ಸಂಚಾರ ಪೊಲೀ ಸರು ಯಾವುದೇ ಸಂದರ್ಭದಲ್ಲಿ ಆರೋಪಿ ಯಿಂದ ದಂಡದ ಮೊತ್ತ ಸಂಗ್ರಹಿಸಲು ಅವಕಾ ಶವಿಲ್ಲ ಎಂದು ಹೈಕೋರ್ಟ್ ಪುನರುಚ್ಚರಿಸಿದೆ.
ಹೈಕೋರ್ಟ್ ನೀಡಿದ್ದ ತೀರ್ಪು ಉಲ್ಲೇಖಿಸಿದ ನ್ಯಾಯಪೀಠ, ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರ ಕಚೇರಿ ಹೊರಡಿಸಿರುವ ಸುತ್ತೋಲೆ ಪ್ರಕಾರ, ದಂಡದ ಮೊತ್ತವನ್ನು ನಿರ್ಧರಿಸಲು ನ್ಯಾಯಾಲಯಕ್ಕೆ ಮಾತ್ರ ಅಧಿಕಾರವಿದೆ. ಯಾವುದೇ ಪರಿಸ್ಥಿತಿಯಲ್ಲೂ ಸಂಚಾರ ಪೊಲೀಸರು ಆರೋಪಿಯಿಂದ ದಂಡ ಸಂಗ್ರಹಿ ಸಲು ಸಾಧ್ಯವಿಲ್ಲ. ವಾಹನ ತಪಾಸಣಾ ಚಟುವಟಿಕೆಯನ್ನು ವಿಡಿಯೋ ಚಿತ್ರೀಕರಣ ಮಾಡಬೇಕು. ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆಗೆ ಮುಂದಾದರೆ ವ್ಯಕ್ತಿಯನ್ನು ತಡೆಯಬೇಕು. ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಠಾಣೆಯ ಪೊಲೀಸರನ್ನು ಕರೆಸಿ, ಆರೋಪಿಯನ್ನು ವಶಕ್ಕೆ ನೀಡಬೇಕು. ಇಲ್ಲದಿದ್ದರೆ ಹಲ್ಲೆ ಹಾಗೂ ಬಲಪ್ರಯೋಗ ನಡೆಸಿ ಸರ್ಕಾರಿ ಅಧಿಕಾರಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಪ್ರಕರಣವನ್ನು ಸಾಬೀತುಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.