ಮನೆ ಅಪರಾಧ ಒಂಟಿ ಮಹಿಳೆ ಮೇಲೆ ಅತ್ಯಾಚಾರ: ಸಂತ್ರಸ್ತೆಗೆ ಚಾಕು ಇರಿದು ಪರಾರಿಯಾದ ಕಾಮುಕರು

ಒಂಟಿ ಮಹಿಳೆ ಮೇಲೆ ಅತ್ಯಾಚಾರ: ಸಂತ್ರಸ್ತೆಗೆ ಚಾಕು ಇರಿದು ಪರಾರಿಯಾದ ಕಾಮುಕರು

0

ಗುರುಗ್ರಾಮ(Gurugram): ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಬಳಿಕ ಆಕೆಗೆ ಚಾಕುವಿನಿಂದ ಇರಿದು ಆರೋಪಿಗಳಿಬ್ಬರು ಪರಾರಿಯಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಸಂತ್ರಸ್ತೆಯನ್ನು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ಪತಿ ಕೆಲಸಕ್ಕೆಂದು ಹೋಗಿದ್ದು, 24 ವರ್ಷದ ಮಹಿಳೆ ಮನೆಯಲ್ಲಿ ಒಂಟಿಯಾಗಿದ್ದಳು. ಒಂಟಿಯಾಗಿದ್ದ ಮಹಿಳೆ ಮನೆಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಳಿಕ ಆಕೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಗಂಭೀರ ಸ್ಥಿತಿಯಲ್ಲೂ ಮಹಿಳೆ ತನ್ನ ಪತಿಗೆ ಕರೆ ಮಾಡಿ, ಇಬ್ಬರು ಪುರುಷರು ನನ್ನ ಮೇಲೆ ಅತ್ಯಾಚಾರ ಎಸಗಿ, ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ಮಹಿಳೆ ತನ್ನ ಪತಿಗೆ ಹೇಳಿದ್ದಾರೆ. ಪತಿ ಕೂಡಲೇ ತನ್ನ ಹೆಂಡ್ತಿಯನ್ನು ಗುರುಗ್ರಾಮ್‌ನ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಮಹಿಳೆಯ ಗಂಭೀರ ಸ್ಥಿತಿಯನ್ನು ಕಂಡ ವೈದ್ಯರು ಆಕೆಯನ್ನು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ಕಳುಹಿಸಿದರು.

ಸಂತ್ರಸ್ತೆಯ ಪತಿ ಡಿಎಲ್‌ಎಫ್ ಹಂತ-3 ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಂತ್ರಸ್ತೆಯ ಸ್ಥಿತಿ ಚಿಂತಾಜನಕವಾಗಿದ್ದು, ಸದ್ಯ ಆಕೆಯ ಪತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದ ಆರೋಪಿಯನ್ನು ಬಿಹಾರದ ನಿವಾಸಿ ಅನಿಲ್ ಠಾಕೂರ್ ಎಂದು ಗುರುತಿಸಲಾಗಿದೆ. ಎರಡನೇ ಆರೋಪಿ ತಲೆಮರೆಸಿಕೊಂಡಿದ್ದಾನೆ. ಶೀಘ್ರದಲ್ಲೇ ಎರಡನೇ ಆರೋಪಿಯನ್ನೂ ಬಂಧಿಸಲಾಗುವುದು ಎಂದು ಗುರುಗ್ರಾಮ್ ಪೊಲೀಸರು ಹೇಳಿದ್ದಾರೆ.