ಮನೆ ರಾಜ್ಯ ಮಾರತ್ತಹಳ್ಳಿ ಬ್ರಿಡ್ಜ್  ಸಮೀಪದ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ

ಮಾರತ್ತಹಳ್ಳಿ ಬ್ರಿಡ್ಜ್  ಸಮೀಪದ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ

0

ಬೆಂಗಳೂರು: ಮಾರತ್ತಹಳ್ಳಿ ಬ್ರಿಡ್ಜ್ ಸಮೀಪ ಮೂರಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ತಡರಾತ್ರಿ 11.45ರ ಸುಮಾರಿಗೆ ಘಟನೆ ನಡೆದಿದೆ.

ಬೆಂಕಿಯ ಕೆನ್ನಾಲಿಗೆಗೆ ಕಟ್ಟಡದಲ್ಲಿದ್ದ ಬಟ್ಟೆ ಅಂಗಡಿ ಸುಟ್ಟು ಕರಕಲಾಗಿದೆ. ಕಟ್ಟಡದ ಮುಂದೆ ಇದ್ದ ತೆಂಗಿನ ಮರ, ಅಂಗಡಿ ಪಕ್ಕದಲ್ಲಿದ್ದ ಟ್ರಾನ್ಸ್​​ ಫಾರ್ಮರ್ ಕೂಡ ಬೆಂಕಿಗಾಹುತಿ ಆಗಿವೆ. ಇಷ್ಟೇ ಅಲ್ಲದೇ ಪಕ್ಕದ ಕಟ್ಟಡಕ್ಕೂ ಬೆಂಕಿ ಆವರಿಸಿ ಮೂರ್ನಾಲ್ಕು ಅಂಗಡಿಗೂ ತಗುಲಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಅಂಗಡಿ ಪಕ್ಕದಲ್ಲೇ ಇದ್ದ ಟ್ರಾನ್ಸ್ ​​ಫಾರ್ಮರ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಹೊತ್ತಿಕೊಂಡ ವೇಳೆ ಈ ನಾಲ್ವರು ಕಟ್ಟಡದಲ್ಲಿದ್ದರು. ಕೂಡಲೇ ಇದನ್ನು ಗಮನಿಸಿದ ನಾಲ್ವರು ಪಕ್ಕದ ಕಟ್ಟಡಕ್ಕೆ ಹಾರಿ ಜೀವ ಉಳಿಸಿಕೊಂಡಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಮಧ್ಯರಾತ್ರಿ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಐದಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದವು. ಈ ವೇಳೆ ಓರ್ವ ಅಗ್ನಿಶಾಮಕ ಸಿಬ್ಬಂದಿಗೆ ಗಾಯಗೊಂಡಿದ್ದಾರೆ.