ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಭೀತಿ ಹಿನ್ನೆಲೆ ಸರ್ಕಾರದ ಮಾರ್ಗಸೂಚಿಯಂತೆ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಸರ್ಕಾರದ ಆದೇಶವನ್ನು ನಾವು ಕಟ್ಟನಿಟ್ಟಾಗಿ ಪಾಲನೆ ಮಾಡುತ್ತೇವೆ. ಇಂದು ಕೇಂದ್ರ ಆರೋಗ್ಯ ಸಚಿವರ ಜೊತೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆದಿದೆ. ಸಭೆಯಲ್ಲಿ ಸಲಹೆ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಆದೇಶದಂತೆ ಮುಜರಾಯಿ ಇಲಾಖೆ ಹಾಗೂ ಸಾರಿಗೆ ನಿಗಮಗಳಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿಯಲ್ಲಿ ಪ್ರಯಾಣಿಸುವ ಪ್ರತಿಯೊಬ್ಬ ಪ್ರಯಾಣಿಕರೂ ಮಾಸ್ಕ್ ಧರಿಸಿ ಪ್ರಯಾಣಿಸಿ ಎಂದು ಮನವಿ ಮಾಡಿದರು.
ಕೇರಳದಲ್ಲಿ ಕೋವಿಡ್ ಆರ್ಭಟ ಹಿನ್ನೆಲೆ ಕೆಎಸ್‌ಆರ್‌ಟಿಸಿ ಮತ್ತೆ ಅಲರ್ಟ್ ಆಗಿದ್ದು, ಕೇರಳದಿಂದ ಬರುವ ಹಾಗೂ ಹೋಗುವ ಬಸ್ಸುಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಅದರಂತೆ ಅಧಿಕಾರಿಗಳು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.