ಮನೆ ಸಾಹಿತ್ಯ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

0

ಮಂಗಳೂರು: ಲಕ್ಷ್ಮೀಶ ತೋಳ್ಪಾಡಿ ಅವರು 2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸಾಹಿತ್ಯ ಅಕಾಡೆಮಿ ವಾರ್ಷಿಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು 24 ಭಾಷೆಗಳಲ್ಲಿ ಬುಧವಾರ (ಡಿ.20) ಪ್ರಕಟಿಸಿದೆ. ಇದರಲ್ಲಿ 9 ಕವನಗಳು, 6 ಕಾದಂಬರಿಗಳು, 5 ಸಣ್ಣ ಕಥೆಗಳು, 3 ಪ್ರಬಂಧಗಳು ಮತ್ತು 1 ಸಾಹಿತ್ಯ ಅಧ್ಯಯನಗಳು 2023ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಗೆದ್ದಿವೆ.

ಲಕ್ಷ್ಮೀಶ ತೋಳ್ಪಾಡಿ ಅವರು ಬರೆದ “ಮಹಾಭಾರತ ಅನುಸಂಧಾನದ ಭಾರತಯಾತ್ರೆ” ಪ್ರಬಂಧಗಳಿಗೆ ಈ ವಿಶೇಷ ಗೌರವ ದೊರೆತಿದೆ.

ಲೇಖಕ, ಚಿಂತಕ ಮತ್ತು ವಿದ್ವಾಂಸರಾಗಿರುವ ಲಕ್ಷ್ಮೀಶ ತೋಳ್ಪಾಡಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದವರು.