ಹಾವೇರಿ: ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಕ್ಕಾಗಿ ಹಾವೇರಿ ಜಿಲ್ಲೆಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೊಲೀಸ್ ಪೇದೆ ಸೋಮಶೇಖರ ಭೀಮಪ್ಪ ಕುಂಕುಮಗಾರ ಅವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ನಗರ ಸಶಸ್ತ್ರ ಮೀಸಲು (ಸಿಎಆರ್) ಪಡೆಯಲ್ಲಿ ಕೆಲಸ ಮಾಡುತ್ತಿದ್ದ ಕುಂಕುಮಗಾರ, ಹಿರೇಕೆರೂರು ಪಟ್ಟಣದ ಸಮೀಪವಿರುವ ಭೋಗಾವಿ ಗ್ರಾಮದಲ್ಲಿ ವಾಸವಾಗಿದ್ದರು.
ಮೂಲತಃ ಬಲಿಜ ಸಮುದಾಯದ ಕುಂಕುಮಗಾರ ಜಾತಿಗೆ ಸೇರಿದ ಇವರು ಚನ್ನದಾಸರ ಸಮುದಾಯದವರು ಎಂದು ಸುಳ್ಳು ಜಾತಿ ಪತ್ರ ನೀಡಿದ್ದಾರೆ. ಕುಂಕುಮಗಾರ ಅವರು ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಪ್ರಮಾಣಪತ್ರವನ್ನು ಪಡೆಯಲು, ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಇತರ ದಾಖಲೆಗಳನ್ನು ಹಿರೇಕೆರೂರಿನಲ್ಲಿ ತಹಸೀಲ್ದಾರ್ ಅವರಿಗೆ ಸಲ್ಲಿಸಿದ್ದರು.
ಭೋಗಾವಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಹನುಮಂತಪ್ಪ ತಳವಾರ ಈ ವಂಚನೆಗೆ ಸಹಕರಿಸಿದ್ದಾರೆ.
ಅಪರಾಧಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಗರ ಸಶಸ್ತ್ರ ಮೀಸಲು ಪಡೆಯಲ್ಲಿ ಯಶಸ್ವಿಯಾಗಿ ಸ್ಥಾನ ಪಡೆದಿದ್ದಾರೆ. ಜಿಲ್ಲಾಧಿಕಾರಿ ನಡೆಸಿದ ತನಿಖೆ ಮತ್ತು ವಿಶೇಷ ಸಮಿತಿಯು ಅವರ ವಿರುದ್ಧದ ಆರೋಪಗಳನ್ನು ಪರಿಶೀಲಿಸಿತು. ನಂತರ ಅವರ ವಿರುದ್ಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನ್ಯಾಯಾಧೀಶ ಜಿ.ಎಲ್ ಲಕ್ಷ್ಮೀನಾರಾಯಣ ಅವರು ಬುಧವಾರ ತೀರ್ಪು ಪ್ರಕಟಿಸಿದ್ದು, ಆರೋಪಿಗೆ ಏಳು ವರ್ಷ ಜೈಲು ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಸರೋಜಾ ಜಿ. ಕೂಡಲಗಿಮಠ ಅವರು ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.