ಪೂಂಚ್ (ಜಮ್ಮು): ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಗುರುವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮತ್ತೋರ್ವ ಯೋಧ ಹುತಾತ್ಮರಾಗಿದ್ದು. ಇದರೊಂದಿಗೆ ಹುತಾತ್ಮ ಯೋಧರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಗುರುವಾರ ಮಧ್ಯಾಹ್ನ 3.45ಕ್ಕೆ ರಜೌರಿಯ ಪೂಂಚ್ ನವ್ವಿ ಥಾನಮಂಡಿಯಲ್ಲಿ ಹೋಗುತ್ತಿದ್ದ ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಹೊಂಚು ಹಾಕಿ ದಾಳಿ ನಡೆಸಿದ್ದರು. ಭಯೋತ್ಪಾದಕರ ಏಕಾಏಕಿ ದಾಳಿಗೆ ಯೋಧರು ತಕ್ಷಣವೇ ಪ್ರತ್ಯುತ್ತರ ನೀಡಿದರು. ಕೂಡಲೇ ಸ್ಥಳದಲ್ಲಿ ಎನ್‌ಕೌಂಟರ್ ಆರಂಭವಾಗಿತ್ತು.
ಈ ವೇಳೆ ನಡೆದ ಚಕಮಕಿಯಲ್ಲಿ ಮೂವರು ಯೋಧರು ಪ್ರಾಣ ಕಳೆದುಕೊಂಡು, ಇಬ್ಬರು ಗಾಯಗೊಂಡಿದ್ದರು. ಇದೀಗ ಮತ್ತೋರ್ವ ಯೋಧ ಹುತಾತ್ಮರಾಗಿದ್ದಾರೆಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
ನವೆಂಬ್ 22 ರಂದು ಉಗ್ರರು ಹಾಗೂ ಸೈನಿಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕ ಯೋಧ ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದರು. ಇದಕ್ಕೂ ಮೊದಲು ಸೆಪ್ಟೆಂಬರ್ ನಲ್ಲಿ ನಡೆದ ದಾಳಿಗೆ ಇಬ್ಬರು ಯೋಧರು ಹುತಾತ್ಮರಾಗಿದ್ದರು. ಈ ವರ್ಷ ರಜೌರಿ, ಪೂಂಚ್ ಮತ್ತು ರೆಸಾಯ್ ಜಿಲ್ಲೆಗಳಲ್ಲಿ ಯೋಧರು ಮತ್ತು ಉಗ್ರರ ನಡುವಿನ ಮುಖಾಮುಖಿ, ಉಗ್ರರ ದಾಳಿಯಲ್ಲಿ 54 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ 19 ಯೋಧರು. 28 ಮಂದಿ ಉಗ್ರರು ಹಾಗೂ 7 ನಾಗರೀಕರು ಸೇರಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.