ಮನೆ ಕ್ರೀಡೆ ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ 78 ರನ್ ಗಳ ಜಯ

ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ 78 ರನ್ ಗಳ ಜಯ

0

ಇಲ್ಲಿಯ ಪಾರ್ಲ್ ನ ಬೋಲ್ಯಾಂಡ್ ಪಾರ್ಕ್ ನಲ್ಲಿ ಗುರುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರುನೇ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 78 ರನ್ ಳಿಂದ ಗೆದ್ದುಕೊಡಿದ್ದು 2-1 ಅಂತರದಿಂದ ಸರಣಿಯನನ್ನು ವಶಪಡಿಸಿಕೊಂಡಿದೆ.

ಮೊದಲು ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತ್ತು, ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತ  ಸಂಜು ಸ್ಯಾಮ್ಸ್ನ್ ಅವರ ಚೊಚ್ಚಲ ಶತಕದ ನೆರವಿನಿಂದ 50 ಓವರ್ ಗಳಿಗೆ  8 ವಿಕೆಟ್ ನಷ್ಟಕ್ಕೆ ಭಾರತ 296 ರನ್ ಗಳಿಸಿತು.

297 ರನ್ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ 45.5 ಓವರ್ ಗಳಲ್ಲಿ 218 ರನ್ ಗಳಿಗೆ ಸರ್ವಪತನ ಕಂಡಿತು. ಇದರೊಂದಿಗೆ ಭಾರತ ಎರಡನೇ ಬಾರಿಗೆ ದಕ್ಷಿಣ ಆಫ್ರಿಕಾ ನೆಲದಲ್ಲಿ ಸರಣಿ 2-1 ಅಂತರದಿಂದ ಗೆದ್ದುಕೊಂಡಿತು.

ಭಾರತದ ಪರ ಅರ್ಷದೀಪ್ 4 ವಿಕೆಟ್, ಆವೇಶ್ ಮತ್ತು ಸುಂದರ್ ತಲಾ 2, ಮುಖೇಶ್ ಕುಮಾರ್, ಅಕ್ಷರ್ ಪಾಟೀಲ್ ತಲಾ ಒಂದು ವಿಕೆಟ್ ಪಡೆದರು.

ಭಾರತ ತಂಡ : ಸಾಯಿ ಸುದರ್ಶನ್, ಸಂಜು ಸ್ಯಾಮ್ಸನ್, ರಜತ್ ಪಾಟಿದಾರ್, ತಿಲಕ್ ವರ್ಮಾ, ಕೆಎಲ್ ರಾಹುಲ್ (ವಿಕೆಟ್ ಕೀಪರ್/ನಾಯಕ), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.

ದಕ್ಷಿಣ ಆಫ್ರಿಕಾ ತಂಡ : ರೀಜಾ ಹೆಂಡ್ರಿಕ್ಸ್, ಟೋನಿ ಡಿ ಜಾರ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್(ನಾಯಕ), ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ನಾಂಡ್ರೆ ಬರ್ಜರ್, ಲಿಜಾಡ್ ವಿಲಿಯಮ್ಸ್, ಬ್ಯೂರಾನ್ ಹೆಂಡ್ರಿಕ್ಸ್.